ಜೆಡಿಎಸ್ಗೆ (JDS) ಬಹುಮತ ನೀಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ (KUMARASWAMY) ತಿಳಿಸಿದ್ದಾರೆ. ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಾತನಾಡಿದ ಅವರು ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಈ ಬಾರಿ ಕನ್ನಡಿಗರ ಬಹುಮತದ ಸರ್ಕಾರ ಬೇಕು. ಯಾವ ಪಕ್ಷದ ಜೊತೆಯೂ ಜೆಡಿಎಸ್ ಹೊಂದಾಣಿಕೆ ಮಾಡಿಕೊಳ್ಳಲ್ಲ. 30 ಅಥವಾ 40 ಸ್ಥಾನಕ್ಕಾಗಿ ಹೋರಾಟ ಅಲ್ಲ. ಪೂರ್ಣ ಪ್ರಮಾಣದ ಸರ್ಕಾರಕ್ಕೆ ಹೋರಾಟ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ನಮ್ಮದು ವಿಚಾರಾಧಾರಿತವಾದ ಹೋರಾಟವಾಗಿದೆ. ಧರ್ಮ ಧರ್ಮಗಳ ನಡುವೆ ಬೆಂಕಿ ಇಟ್ಟು ಮತ ಕೇಳುತ್ತಿಲ್ಲ. ರಾಜ್ಯದ ಅಭಿವೃದ್ದಿಗಾಗಿ ನಮ್ಮ ಹೋರಾಟ ಎಂದು ಹೆಚ್ಡಿಕೆ (HDK ) ಹೇಳಿದ್ರು. ಇದೇ ವೇಳೆ ಜನತಾ ಜಲಧಾರೆ (JANATHA JALADHARE) ಯಾತ್ರೆ ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಗೆ ಪರ್ಯಾಯವಲ್ಲ. ಮೇಕೆದಾಟು ಶೋಗಾಗಿ ನಡೆಸಿದ ಯಾತ್ರೆ. ಅವರು ನೇರವಾಗಿ ರಾಜಕೀಯ ಯಾತ್ರೆ ಅಂತಾ ಹೇಳಲಿಲ್ಲ. ನಮ್ಮದು ಜನರ ಮುಂದೆ ಸಮಸ್ಯೆ ಬಿಚ್ಚಿಡಲು ಯಾತ್ರೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ – ಹಿಜಾಬ್ ವಿಚಾರದಲ್ಲಿ ಸ್ವಾಮೀಜಿಗಳನ್ನ ಎಳೆದು ತರೋ ಅವಶ್ಯಕತೆ ಇರಲಿಲ್ಲ – ಸಿದ್ದರಾಮಯ್ಯ ವಿರುದ್ಧ ಗುಡುಗಿದ ಹೆಚ್ಡಿಕೆ