ಆಂಧ್ರಪ್ರದೇಶದ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ – 6 ಮಂದಿ ಕಾರ್ಮಿಕರು ಸಾವು

ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಭಾರೀ ಪ್ರಮಾಣದ ಅಗ್ನಿ ಅವಘಡ ಸಂಭವಿಸಿ ಸುಮಾರು 6 ಮಂದಿ ಸಾವನ್ನಪ್ಪಿ, 12 ಮಂದಿ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಮಾಸುನೂರು ವಲಯದ ಅಕ್ಕಿರೆಡ್ಡಿಗುಡೆಂ ನಲ್ಲಿ ಸಂಭವಿಸಿದೆ.

ಪೋರಸ್‌ ಎಂಬ ಹೆಸರಿನ ರಾಸಾಯನಿಕ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಐವರು ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದು, ಮತ್ತೊಬ್ಬರು ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವವರನ್ನು ಚಿಕಿತ್ಸೆಗಾಗಿ ನೂಜಿವೀಡು ಆಸ್ಪತ್ರೆಗೆ ರವಾನಿಸಲಾಗಿದೆ. ಕೆಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ವಿಜಯವಾಡಕ್ಕೆ ಸ್ಥಳಾಂತರಿಸಲಾಗಿದೆ. ಇದನ್ನು ಓದಿ :-ಅದಾನಿ ಸಿರಿವಂತಿಕೆಯ ನಾಗಲೋಟ – ಈಗ ವಿಶ್ವದ 6ನೇ ಸಿರಿವಂತ

CM Y S Jagan Mohan Reddy fails to get appointment with Amit Shah

ಮೃತರ ಕುಟುಂಬಸ್ಥರಿಗೆ 25 ಲಕ್ಷ ಪರಿಹಾರ ಘೋಷಣೆ
ದುರ್ಘಟನೆಗೆ ತೀವ್ರ ಸಂತಾಪ ಸೂಚಿಸಿರುವ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ, ಮೃತರ ಕುಟುಂಬಸ್ಥರಿಗೆ ರೂ.25 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ, ತೀವ್ರವಾಗಿ ಗಾಯಗೊಂಡವರಿಗೆ ರೂ.5 ಲಕ್ಷ ಹಾಗೂ ಸಣ್ಣ ಪುಟ್ಟ ಗಾಯಗಳಾದವರಿಗೆ ರೂ.2 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.

ಇದನ್ನು ಓದಿ :-  ಸಂತೋಷ್ ಅಂತ್ಯಕ್ರಿಯೆ ವಿಚಾರದಲ್ಲಿ ಸಂಬಂಧಿಕರಿಂದಲೇ ವಾಗ್ವಾದ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!