ಮೈಸೂರಿನಲ್ಲಿ ಭೀಕರ ಅಪಘಾತ (Accident) ಸಂಭವಿಸಿದೆ. ಅಪಘಾತದಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ. ಬೊಲೆರೋ ವಾಹನ ಮರಕ್ಕೆ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಮೈಸೂರು (Mysore) ಜಿಲ್ಲೆಯ ಹುಣಸೂರು ತಾಲ್ಲೂಕಿನಲ್ಲಿ ಕಲ್ ಬೆಟ್ಟದ ಬಳಿ ಭೀಕರ ಅಪಘಾತ ಸಂಭವಿಸಿದೆ. ಕೊಡಗು ಜಿಲ್ಲೆ (Coorg district) ವಿರಾಜಪೇಟೆ ತಾಲ್ಲೂಕಿನ ಪಾಲಿ ಬೆಟ್ಟ ಗ್ರಾಮದ ಅನಿಲ್, ಸಂತೋಷ್, ವಿನುತ್, ರಾಜೇಶ್, ದಯಾನಂದ, ಬಾಬು ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ :-ನಮ್ಮ ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಆಗಿಲ್ಲ – ಸುನೀಲ್ ಕುಮಾರ್
ಮದುವೆ ಮುಗಿಸಿಕೊಂಡು ವಾಪಸ್ ಹೋಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಹುಣಸೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ –ಬಿಜೆಪಿ ಯಾವ ಮುಖ ಇಟ್ಕೊಂಡು ಸರ್ಕಾರ ನಡೆಸುತ್ತಿದೆ – ವಿ.ಎಸ್ ಉಗ್ರಪ್ಪ