ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ಪರೀಕ್ಷೆ ಬರೆಯಲು ಸಜ್ಜಾದ ವಿದ್ಯಾರ್ಥಿಗಳು

ಇಂದಿ ನಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ (PUC) ಪರೀಕ್ಷೆ ನಡೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟಾರೆ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ.

Karnataka PUC II exam timetable released, check schedule | Education  News,The Indian Express

ಎಸ್ಎಸ್ಎಲ್ ಸಿ (SSLC) ಪರೀಕ್ಷೆಯಂತೆಯೇ ಪಿಯು ಪರೀಕ್ಷೆಗೂ ಯಾವುದೇ ಧರ್ಮ ಸೂಚಕ ಉಡುಪು ಧರಿಸುವುದನ್ನು ಸರ್ಕಾರ ಈಗಾಗಲೇ ನಿಷೇಧಿಸಿದ್ದು, ಅದರಂತೆ ತಮ್ಮ ಕಾಲೇಜಿನಲ್ಲಿ ನಿಗದಿಪಡಿಸಿದ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸಬೇಕಿದೆ. ಸಮವಸ್ತ್ರ ಇಲ್ಲದಿದ್ದಲ್ಲಿ ಯಾವುದೇ ಧರ್ಮ ಸೂಚಕವಲ್ಲದ ಉಡುಪು ಧರಿಸಿ ಹಾಜರಾಗಲು ಸೂಚಿಸಿದೆ. ಬಾರಿ ಪರೀಕ್ಷೆಗೆ 5241 ಕಾಲೇಜುಗಳಿಂದ 6,84,255 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಒಟ್ಟು 1076 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿವೆ. ಮುಖ್ಯ ಅಧೀಕ್ಷಕರನ್ನು ಬಿಟ್ಟು ಉಳಿದ ಸಿಬ್ಬಂದಿ-ವಿದ್ಯಾರ್ಥಿಗಳಿಗೆ ಮೊಬೈಲ್ ನಿಷೇಧಿಸಲಾಗಿದೆ.

karnataka 2nd puc exam 2021: Conduct district level PU final exams; DK PU  Principals to govt - Times of India


ಪರೀಕ್ಷಾ ಅಕ್ರಮಗಳ ಮೇಲೆ ನಿಗಾವಹಿಸಲು 2900ಕ್ಕೂ ಹೆಚ್ಚು ಜಿಲ್ಲಾ, ತಾಲ್ಲೂಕು ಮತ್ತು ವಿಶೇಷ ಜಾಗೃತ ದಳ ರಚಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿ ಯಾವುದೇ ಅಕ್ರಮಗಳಿಗೆ ಅವಕಾಶವಾಗದಂತೆ ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನು ಓದಿ :–  ಸಿಖ್ ಗುರುಗಳ ಆದರ್ಶ ಅನುಸರಿಸುತ್ತಿದೆ- ನರೇಂದ್ರ ಮೋದಿ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!