ಹಿಜಾಬ್ ಧರಿಸಿ ಶಾಲೆ – ಕಾಲೇಜಿಗೆ ಹಾಜರಾಗಲು ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರು ಪರೀಕ್ಷೆ ಸಮಯದಲ್ಲೂ ತಮ್ಮ ಪಟ್ಟು ಸಡಿಲಿಸಿಲ್ಲ. ಹಿಜಾಬ್ಗಾಗಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿನಿಯರ ಪೈಕಿ ಇಬ್ಬರು, ಇಂದು ಪಿಯುಸಿ ಪರೀಕ್ಷೆ ಬರೆಯಬೇಕಿತ್ತು. ಆದರೆ, ಈ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬಂದ ಕಾರಣ ಪರೀಕ್ಷೆ ಬರೆಯಲು ಅನುಮತಿ ಸಿಕ್ಕಿಲ್ಲ.
ಪರೀಕ್ಷೆ ಬರೆಯಲು ಅನುಮತಿ ನೀಡದ ಹಿನ್ನೆಲೆಯಲ್ಲಿ ಈ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗದೆ ಕಾಲೇಜ್ನಿಂದ ಹೊರಗೆ ಬಂದಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ಪಡೆದಿದ್ದ ಇಬ್ಬರು ವಿದ್ಯಾರ್ಥಿನಿಯರು, ಉಡುಪಿಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ಪರೀಕ್ಷಾ ಕೇಂದ್ರ ಆಗಮಿಸಿದ್ದರು. ಇದನ್ನು ಓದಿ :– ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ – ಪರೀಕ್ಷೆ ಬರೆಯಲು ಸಜ್ಜಾದ ವಿದ್ಯಾರ್ಥಿಗಳು
ಈ ವೇಳೆ ಪರೀಕ್ಷಾ ಕೇಂದ್ರದ ಸಿಬ್ಬಂದಿ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಸಾಕಷ್ಟು ಬಾರಿ ಮನವರಿಕೆ ಮಾಡಿದರು. ಇಷ್ಟಾದರೂ ವಿದ್ಯಾರ್ಥಿನಿಯರು ಹಿಜಾಬ್ ಇಲ್ಲದೇ ಪರೀಕ್ಷೆ ಬರೆಯುವುದಿಲ್ಲ ಎಂದು ಪಟ್ಟು ಹಿಡಿದರು. ಅಂತಿಮವಾಗಿ ಪರೀಕ್ಷಾ ಕೇಂದ್ರದಿಂದ ಹೊರ ಬಂದಿದ್ದಾರೆ.
ಇದನ್ನು ಓದಿ :– ಉರ್ದು ಶಾಲೆ ಮುಚ್ಚುವ ಚಿಂತನೆ ಇಲ್ಲ – ಬಿ.ಸಿ ನಾಗೇಶ್