ಕೋವಿಡ್ 4ನೇ ಅಲೆ- ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ರಾಜಧಾನಿ ದೆಹಲಿ ಸೇರಿದಂತೆ ಇತರೆಡೆ ಕೋವಿಡ್ ಸೋಂಕಿತರ ಸಭೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲು ಸರ್ಕಾರ ಮುಂದಾಗಿದೆ.

Karnataka CM Basavaraj Bommai may get five deputies, 6-8 new faces in his  cabinet | Bengaluru News - Times of India

ಈ ಹಿನ್ನೆಲೆಯಲ್ಲಿ ಇಂದು ಸಿಎಂ ಬೊಮ್ಮಾಯಿ ಉನ್ನತ ಮಟ್ಟದ ಸಭೆ ಕರೆದಿದ್ದಾರೆ. ಕರ್ನಾಟಕದಲ್ಲಿ ನಾಲ್ಕು ವಾರದ ಬಳಿಕ ಕೊರೊನಾ ನಾಲ್ಕನೇ ಅಲೆಯ ಆರಂಭದ ಬಗ್ಗೆ ತಜ್ಞರ ತಂಡ ಮುನ್ಸೂಚನೆ ಕೊಟ್ಟಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ.

Need to augment public health management: Sudhakar | Deccan Herald


ಬೆಂಗಳೂರಿನ ಸಿಎಂ ಗೃಹಕಚೇರಿ ಕೃಷ್ಣದಲ್ಲಿ ಮಧ್ಯಾಹ್ನ ಸಭೆ ನಡೆಯಲಿದೆ. ಸಭೆಯಲ್ಲಿ ಕಂದಾಯ ಸಚಿವ ಅಶೋಕ್, ಆರೋಗ್ಯ ಸಚಿವ ಡಾ. ಸುಧಾಕರ್, ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ್ ಹಾಗೂ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಸದಸ್ಯರು ಭಾಗಿಯಾಗಲಿದ್ದಾರೆ. ಸಭೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸಮಾಲೋಚನೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

Breaking; ಹೊಸ ಕೋವಿಡ್ ಪ್ರಕರಣ ಹೆಚ್ಚಳ; ಇದು 4ನೇ ಅಲೆ ಅಲ್ಲ | Rise in COVID-19  cases will not lead to fourth wave Says Dr Raman R Gangakhedkar - Kannada  Oneindia

ಬುಧವಾರದಿಂದ ರಾಜ್ಯದಲ್ಲಿ ಕಟ್ಟುನಿಟ್ಟಿನ ಕೋವಿಡ್ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಐಐಟಿ ಕಾನ್ಪುರದ ವರದಿಯ ಪ್ರಕಾರ ಜೂನ್ನಲ್ಲಿ ಕೊರೊನಾ ನಾಲ್ಕನೇ ಅಲೆಯ ಆತಂಕ ಶುರುವಾಗಲಿದೆ. ಕರ್ನಾಟಕದ ನೆರೆ ರಾಜ್ಯದಲ್ಲಿ ಪ್ರಕರಣ ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ನಿಧಾನಕ್ಕೆ ಕೇಸ್ಗಳ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಇದು ಕರ್ನಾಟಕಕ್ಕೆ ಎಚ್ಚರಿಕೆ ಆಗಿದೆ.

 ಇದನ್ನೂ ಓದಿ :- ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಬೇಡವೆಂದ BSY

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!