ಅಂತರಾಷ್ಟ್ರೀಯ ಯೋಗ ದಿನಾಚರಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಮೈಸೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಬೇಕು ಎಂಬ ಬೇಡಿಕೆ ಹೆಚ್ಚಾಗುತ್ತಿದೆ.
ಸಂಸದ ಪ್ರತಾಪ್ ಸಿಂಹ ಪ್ರಧಾನಿ ಮೋದಿಯವರಿಗೆ ಮೈಸೂರಿಗೆ ಭೇಟಿ ನೀಡುವಂತೆ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. ಈ ನಡುವೆ ನಿನ್ನೆ ಆಯುಷ್ ಸಚಿವಾಲಯದ ಅಧಿಕಾರಿಗಳು ಮೈಸೂರು ಅರಮನೆ, ದಸರಾ ವಸ್ತುಪ್ರದರ್ಶನ ಮೈದಾನ ಮತ್ತು ಮೈಸೂರು ರೇಸ್ ಕೋರ್ಸ್ಗೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ. ಇದನ್ನೂ ಓದಿ :- PSI ಅಕ್ರಮದಲ್ಲಿ ಅರೆಸ್ಟ್ ಆದ ದಿವ್ಯಾ ಹಾಗರಗಿ ಹೈಡ್ರಾಮಾ
ಕವಿತಾ ಗಾರ್ಗ್, ರಾಮಚಂದ್ರ ಮತ್ತು ಇತರರನ್ನೊಳಗೊಂಡ ಅಧಿಕಾರಿಗಳ ತಂಡವು ಸ್ಥಳದಲ್ಲಿನಸೌಲಭ್ಯಗಳು, ಗೇಟ್ಗಳ ಸಂಖ್ಯೆ, ಮೂಲ ಸೌಕರ್ಯಗಳು, ಭದ್ರತಾ ಅಂಶಗಳ ಬಗ್ಗೆಯೂ ಪರಿಶೀಲನೆ ನಡೆಸಿದೆ ಎಂದು ತಿಳಿದುಬಂದಿದೆ. ಈ ಕುರಿತು ಪ್ರಧಾನಮಂತ್ರಿಗಳ ಕಚೇರಿ ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ :- ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ – ದಿವ್ಯಾ ಹಾಗರಗಿ ಬಂಧನ