ಕೊಳದ ಮಠದ ಶಾಂತವೀರ ಮಹಾಸ್ವಾಮೀಜಿ (80) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರವಷ್ಟೇ ಮಹಾಲಕ್ಷ್ಮೀ ಲೇಔಟ್ ಕಾರ್ಯಕ್ರಮದಲ್ಲಿ ಕೊಳದ ಮಠದ ಶಾಂತವೀರ ಮಹಾಸ್ವಾಮೀಜಿ ಪಾಲ್ಗೊಂಡಿದ್ದರು. ಅವರು ಯಾವುದೇ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿರಲಿಲ್ಲ.
ಆದರೆ ಬೆಳಗ್ಗೆ ಅವರ ಅಣ್ಣನ ಮಗ ಹರ್ಷ ಬಾಗಿಲು ತೆಗೆಯಲು ಹೋಗಿದ್ದಾರೆ. ಅಷ್ಟರಲ್ಲಿ ಕೊನೆಯುಸಿರೆಳೆದಿದ್ದಾರೆ. ಈ ಹಿನ್ನಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಕಲ ಸಂತಾಪ ಸೂಚಿಸಿದ್ದಾರೆ. ಕೊಳದಮಠದ ಪೀಠಾಧ್ಯಕ್ಷರು, ಪರಮಪೂಜ್ಯ ಶ್ರೀ ಶಾಂತವೀರ ಮಹಾಸ್ವಾಮೀಜಿಗಳು ಲಿಂಗೈಕ್ಯರಾದ ಸುದ್ದಿ ತಿಳಿದು ಬಹಳ ದುಃಖವಾಯಿತು. ಇದನ್ನೂ ಓದಿ :- ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ – ತನ್ನ ಬಳಿಯಿದ್ದ ಮೊಬೈಲ್ ಒಡೆದು ಹಾಕಿದ ದಿವ್ಯಾ ಹಾಗರಗಿ
ಸಮಾಜ ಸುಧಾರಣೆಯಲ್ಲಿ ಸದಾ ಮುಂಚೂಣಿಯಲ್ಲಿ ಇರುತ್ತಿದ್ದ ಶ್ರೀಗಳ ಅಗಲಿಕೆ ನಾಡಿಗೆ ಬಹುದೊಡ್ಡ ನಷ್ಟ. ಶ್ರೀಗಳ ಆತ್ಮಕ್ಕೆ ಆ ಭಗವಂತ ಚಿರಶಾಂತಿ ಕರುಣಿಸಲಿ ಹಾಗೂ ಅವರ ಭಕ್ತವೃಂದಕ್ಕೆ ದುಃಖ ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ :- ಯುವತಿ ಮೇಲೆ ಆ್ಯಸಿಡ್ ದಾಳಿ ಪ್ರಕರಣ – ನಾಳೆಯೊಳಗೆ ಆರೋಪಿಯನ್ನ ಬಂದಿಸುತ್ತೇವೆ – ಡಾ. ಕೆ ಸುಧಾಕರ್