ಪ್ರಸಕ್ತ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ ಇನ್ನುಳಿದ ಪಂದ್ಯಗಳಿಗೆ ರವಿಂದ್ರ ಜಡೇಜಾ ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವವನ್ನು ಎಂಎಸ್ ಧೋನಿಗೆ (MSDONI) ಮರಳಿ ಒಪ್ಪಿಸಲು ನಿರ್ಧರಿಸಿದ್ದಾರೆ. ಜಡೇಜಾ ಮನವಿಗೆ ಹಿರಿಯ ವಿಕೆಟ್ ಕೀಪರ್ ಒಪ್ಪಿಗೆ ಸೂಚಿಸಿದ್ದಾರೆಂದು ತಿಳಿದುಬಂದಿದೆ.
2022ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಕ್ಕೂ ಮೊದಲೇ ಎಂಎಸ್ ಧೋನಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕತ್ವವನ್ನು ಆಲ್ರೌಂಡರ್ ರವೀಂದ್ರ ಜಡೇಜಾಗೆ ಬಿಟ್ಟುಕೊಟ್ಟಿದ್ದರು. ಆದರೆ, ಜಡೇಜಾ ಮುನ್ನಡೆಸಿದ ಆರಂಭಿಕ ಎಂಟು ಪಂದ್ಯಗಳಲ್ಲಿ ಚೆನ್ನೈ ಗೆದ್ದಿದ್ದು, ಕೇವಲ ಎರಡೇ ಪಂದ್ಯಗಳಲ್ಲಿ ಮಾತ್ರ ಹಾಗೂ ಇನ್ನುಳಿದ 6ರಲ್ಲಿ ಸೋಲು ಅನುಭವಿಸಿದೆ.
ಹದಿನೈದನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಸಿಎಸ್ಕೆಗೆ ಉಳಿದಿರುವುದು ಕೇವಲ 6 ಪಂದ್ಯಗಳು ಮಾತ್ರ. ಹಾಗಾಗಿ ಪ್ಲೇಆಫ್ಸ್ಗೆ ಅರ್ಹತೆ ಪಡೆಯಬೇಕೆಂದರೆ, ಇನ್ನುಳಿದ ಎಲ್ಲಾ ಹಣಾಹಣಿಗಳು ಸಿಎಸ್ಕೆ ಪಾಲಿಗೆ ನಿರ್ಣಾಯಕವಾಗಿದೆ. ಈ ಹಿನ್ನೆಲೆಯಲ್ಲಿ ರವೀಂದ್ರ ಜಡೇಜಾ ಈ ಮಹತ್ವದ ನಿರ್ಧಾರ ತೆಗೆದುಕೊಂಡಿರಬಹುದೆಂದು ಅಂದಾಜಿಸಲಾಗಿದೆ. ಇದನ್ನೂ ಓದಿ :- CSK ಎದುರು ರಿಷಿ ಧವನ್ ವಿಶೇಷ ರಕ್ಷಣಾ ಕವಚ ತೊಡಲು ಕಾರಣ ಏನು ಗೊತ್ತಾ ..?