ಉಕ್ರೇನ್ ಮೇಲೆ ಸತತ 2 ತಿಂಗಳಿಂದ ಯುದ್ಧ ನಡೆಸುತ್ತಿದ್ದರೂ, ದೇಶವನ್ನು ಹತೋಟಿಗೆ ತೆಗೆದುಕೊಳ್ಳುವಲ್ಲಿ ವಿಫಲವಾಗಿ ಕಂಗೆಟ್ಟಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.
ಪುಟಿನ್ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಪುಟಿನ್ ಕ್ಯಾನ್ಸರ್ ಶಸ್ತ್ರಚಿಕಿತ್ಸೆಗೆ ಒಳಗಾಗಬಹುದು. ದೇಶದ ಭದ್ರತಾ ಮಂಡಳಿಯ ಕಾರ್ಯದರ್ಶಿ ನಿಕೊಲಾಯ್ ಪಟ್ರುಶೇವ್ ಅವರಿಗೆ ತಾತ್ಕಾಲಿಕವಾಗಿ ಅಧಿಕಾರ ಹಸ್ತಾಂತರಿಸುವ ಸಾಧ್ಯತೆಯಿದೆ ಎಂದು ಯುಎಸ್ನ ನ್ಯೂಯಾರ್ಕ್ ಪೋಸ್ಟ್ ವರದಿಯಲ್ಲಿ ತಿಳಿಸಿದೆ.
ರಷ್ಯಾದ ಅಧ್ಯಕ್ಷರು ಕ್ಯಾನ್ಸರ್ ಮತ್ತು ಪಾರ್ಕಿನ್ಸನ್ ಸೇರಿದಂತೆ ಇತರ ಗಂಭೀರ ಕಾಯಿಲೆಗಳಿಂದ ಬಳಲುತ್ತಿದ್ದಾರೆ ಎಂಬ ವದಂತಿಗಳಿವೆ. ನಿರೀಕ್ಷಿತ ಶಸ್ತ್ರಚಿಕಿತ್ಸೆ ಮತ್ತು ಚೇತರಿಕೆಯು ಪುಟಿನ್ ಅವರನ್ನು ಕೆಲ ಕಾಲ ಅಸಮರ್ಥಗೊಳಿಸುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ.ಇದನ್ನೂ ಓದಿ:-ಕಠ್ಮಂಡು ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ – ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್