ಕೋವಿಡ್ ಸಂದರ್ಭದಲ್ಲಿ ಕುಸಿದಿದ್ದ ಆಭರಣ ಮಾರುಕಟ್ಟೆ 2 ವರ್ಷಗಳ ಬಳಿಕ ಈ ಬಾರಿಯ ಅಕ್ಷಯ ತೃತೀಯದಂದು ಮತ್ತೆ ಚೇತರಿಸಿಕೊಂಡಿದೆ.
ದೇಶಾದ್ಯಂತ 2 ವರ್ಷಗಳ ಬಳಿಕ 2022ರ ಅಕ್ಷಯ ತೃತೀಯದಂದು 15,000 ಕೋಟಿ ರೂ. ಮೌಲ್ಯದ ಆಭರಣ ಮಾರಾಟವಾಗಿದೆ. ಇದು ಕೋವಿಡ್ನಿಂದ ವಿಧಿಸಲಾದ ಲಾಕ್ಡೌನ್ ಬಳಿಕದ ಅತಿ ದೊಡ್ಡ ಆಭರಣ ವ್ಯವಹಾರವಾಗಿದೆ ಎಂದು ಅಖಿಲ ಭಾರತ ವ್ಯಾಪರಗಳ ಒಕ್ಕೂಟ ತಿಳಿಸಿದೆ. ಇದನ್ನೂ ಓದಿ :- ಬೆಟ್ಟಿಂಗ್ ಮೇಲೆ ಸರಕಾರದಿಂದ ಗದಾ ಪ್ರಹಾರ – ಆನ್ಲೈನ್ ಗೇಮ್, ಕ್ಯಾಸಿನೋ ಮೇಲೂ ಕೆಂಗಣ್ಣು
ಕೋವಿಡ್ ವಕ್ಕರಿಸಿಕೊಳ್ಳುತ್ತಿದ್ದಂತೆಯೇ ದೇಶಾದ್ಯಂತ ಚಿನ್ನದ ಮಾರಾಟದಲ್ಲಿ ಶೇ.80 ರಷ್ಟು ಭಾರೀ ಇಳಿಕೆ ಕಂಡು ಬಂದಿತ್ತು. ಈ ಬಾರಿ ಕೋವಿಡ್ ಹಾವಳಿ ಕಡಿಮೆಯಿರುವುದರಿಂದ ಹಾಗೂ ಹಬ್ಬದ ಪ್ರಯುಕ್ತ ರಜೆ ಇದ್ದಿದ್ದರಿಂದ ಚಿನ್ನ ಖರೀದಿಗೆ ಜನರು ಮುಗಿ ಬಿದ್ದಿದ್ದಾರೆ. ದೇಶಾದ್ಯಂತ ಒಂದೇ ದಿನ ಬರೋಬ್ಬರಿ 30 ಟನ್ ಚಿನ್ನ ಮಾರಾಟವಾಗಿದೆ.
ಇದನ್ನೂ ಓದಿ :- ಕಠ್ಮಂಡು ನೈಟ್ ಕ್ಲಬ್ ನಲ್ಲಿ ರಾಹುಲ್ ಗಾಂಧಿ – ಸೋಷಿಯಲ್ ಮೀಡಿಯಾದಲ್ಲಿ ವಿಡಿಯೊ ವೈರಲ್