ಕಳೆದ 4-5 ದಿನಗಳಿಂದ ಆಸನಿ ಚಂಡಮಾರುತದ ಎಫೆಕ್ಟ್ ರಾಜ್ಯದಲ್ಲಿ ವ್ಯಾಪಕ ಮಳೆ ಆಗ್ತಿದೆ. ಜಿಲ್ಲೆಯ ಹಲವು ಭಾಗಗಳಲ್ಲಿ ಸುರಿಯುತ್ತಿರೊ ಧಾರಕಾರ ಮಳೆಯಿಂದಾಗಿ ರೈತರು ಬೆಳೆದ ಬೆಲೆ ನೆಲಕಚ್ಚಿದೆ.
ವಿಜಯನಗರದ ಹೊಸಪೇಟೆಯಲ್ಲಿ ವರುಣನ ಅಬ್ಬರ ಮುಂದುವರಿದಿದೆ. ಮಳೆಯಿಂದಾಗಿ ರೈತರು ಬೆಳೆದ ಬಾಳೆ ಹತ್ತಿ ಕಬ್ಬು ಬೆಳೆಗಳು ನೀರಿಗಾಹುತಿಯಾಗಿದೆ. ಪರಿಹಾರಕ್ಕಾಗಿ ಜಿಲ್ಲಾಡಳಿತಕ್ಕೆ ಮೊರೆ ಇಡುತ್ತಿರೊ ಬಾಳೆ ಬೆಳೆದ ಅನ್ನದಾತರು.ಈ ಬಗ್ಗೆ ಅಧಿಕಾರಿಗಳು ಕ್ಷಿಪ್ರಗತಿಯಲ್ಲಿ ಪರಿಹಾರ ನೀಡಬೇಕು ಇಲ್ಲದೆ ಹೋದ್ರೆ ಅನ್ನಧಾತರು ಸಾಲಕ್ಕೆ ಬಲಿಯಾಗಲಿದ್ದಾರೆ. ಜಿಲ್ಲೆಯಲ್ಲಿ ರೈತ ಸಂಘಟನೆಗಳಿಂದ ಬೆಳೆ ನಷ್ಟಕ್ಕೆ ಪರಿಹಾರ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ : – ಆಸಾನಿಚಂಡಮಾರುತದ ಎಫೆಕ್ಟ್ – ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ