ದೇಶದ್ರೋಹ ಕಾನೂನು ಸಂಬಂಧ ಸುಪ್ರೀಂ ಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಮಹತ್ವದ ಸೂಚನೆ ನೀಡಿದೆ. ದೇಶದ್ರೋಹ ಕಾನೂನು ಸಂಬಂಧ ಕೇಂದ್ರ ಸರ್ಕಾರವು ಮರುಪರಿಶೀಲನೆ ಪೂರ್ಣಗೊಳಿಸುವವರೆಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 124ಎ (ದೇಶದ್ರೋಹ) ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸದೇ ಇರುವಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ, ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ಹಿಮಾ ಕೊಹ್ಲಿ ಅವರಿದ್ದ ನ್ಯಾಯಪೀಠ, ಮಧ್ಯಂತರ ಆದೇಶ ನೀಡಿದೆ. ಕೇಂದ್ರ ಸರ್ಕಾರವು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸುವ ವರೆಗೆ ಸರ್ಕಾರಗಳು ದೇಶದ್ರೋಹ ಪ್ರಕರಣವನ್ನು ಬಳಸಿಕೊಳ್ಳುವಂತಿಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ. ಈಗಾಗಲೇ ದೇಶದ್ರೋಹ ಪ್ರಕರಣದಲ್ಲಿ ಜೈಲುಗಳಲ್ಲಿ ಇರುವವರು ಜಾಮೀನಿಗೆ ಅರ್ಜಿ ಸಲ್ಲಿಸಬಹುದು ಎಂದೂ ಪೀಠ ಹೇಳಿದೆ. ಇದನ್ನೂ ಓದಿ : – ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯೋದಕ್ಕೂ ಶಿಕ್ಷಣ ಇಲಾಖೆಯಲ್ಲಿ ನಡೆಯೋದಕ್ಕು ವ್ಯತ್ಯಾಸ ಇದೆ – ಬಸವರಾಜ್ ರಾಯರೆಡ್ಡಿ
ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆಗೆ ಜುಲೈ ತಿಂಗಳನ್ನು ನಿಗದಿಪಡಿಸುವಾಗ ಆರೋಪಿಗಳಿಗೆ ನೀಡಲಾದ ಪರಿಹಾರವನ್ನು ಮುಂದುವರಿಸಲು ಕೋರ್ಟ್ ಹೇಳಿದೆ. “ಕಾನೂನನ್ನು ಸ್ಥಗಿತಗೊಳಿಸುವುದು ಸೂಕ್ತ. ದೇಶದ್ರೋಹಕ್ಕಾಗಿ ರಾಜ್ಯಗಳು ಹೊಸ ಪ್ರಕರಣಗಳನ್ನು ದಾಖಲಿಸುವುದಿಲ್ಲ ಎಂದು ಭಾವಿಸಲಾಗಿದೆ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ವಿ ರಮಣ ನೇತೃತ್ವದ ಪೀಠ ಹೇಳಿದೆ. ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಕೇಂದ್ರ ಸರ್ಕಾರವು ಕಾನೂನನ್ನು ಮರುಪರಿಶೀಲಿಸುವವರೆಗೆ ಭವಿಷ್ಯದ ದೇಶದ್ರೋಹ ಪ್ರಕರಣಗಳನ್ನು ಎದುರಿಸುವ ಯೋಜನೆಯ ಕುರಿತು ಪ್ರಸ್ತಾವಿತ ಕರಡನ್ನು ಹೊಂದಿದ್ದೇವೆ ಎಂದು ಹೇಳಿದರು.
ಇದನ್ನೂ ಓದಿ : – PSI ಹುದ್ದೆ ಕೊಡಿಸುವುದಾಗಿ ಲಕ್ಷ ಲಕ್ಷ ವಸೂಲಿ ಮಾಡಿ ವಂಚಿಸಿದ ಕಿರಾತಕನ ಬಂಧನ