ಆಸಾನಿ ಚಂಡಮಾರುತದ ಪ್ರಭಾವದಿಂದಾಗಿ ಆಂಧ್ರಪ್ರದೇಶದ ಶ್ರೀಕಾಕುಲಂ ಜಿಲ್ಲೆಯ ಸುನ್ನಪಲ್ಲಿಯ ಕರಾವಳಿ ಪ್ರದೇಶಕ್ಕೆ ಬಂಗಾರ ಬಣ್ಣದ ರಥವೊಂದು ತೇಲಿ ಬಂದಿದೆ.
ಸಮುದ್ರದಲ್ಲಿ ತೇಲುತ್ತಿದ್ದ ರಥವನ್ನು ನೋಡಿದ ಗ್ರಾಮಸ್ಥರು ಅದನ್ನು ಹಗ್ಗ ಕಟ್ಟಿ ಎಳೆದು ದಡಕ್ಕೆ ತಂದಿದ್ದಾರೆ. ಚಂಡಮಾರುತದ ತೀವ್ರತೆ ಹೆಚ್ಚಾಗಿರುವುದರಿಂದಾಗಿ ಇದು ಮಯನ್ಮಾರ್, ಮಲೇಷಿಯಾ ಅಥವಾ ಥೈಲೆಂಡ್ನಿಂದ ಬಂದಿರಬಹುದೆಂದು ಶಂಕಿಸಲಾಗಿದೆ. ಇದನ್ನೂ ಓದಿ : – ದೇಶದ್ರೋಹ ಪ್ರಕರಣ ದಾಖಲಿಸಬೇಡಿ – ಕೇಂದ್ರ, ರಾಜ್ಯಗಳಿಗೆ ಸುಪ್ರೀಂ ಸೂಚನೆ
ಈ ರಥವು ನೋಡಲು ಏಷ್ಯಾ ರಾಷ್ಟ್ರಗಳ ಮಠದ ಆಕಾರವನ್ನು ಹೊಂದಿದೆ. ಚಂಡಮಾರುತದ ಪ್ರಭಾವದಿಂದಾಗಿ ಉಂಟಾದ ಎತ್ತರದ ಅಲೆಗಳ ಕಾರಣದಿಂದಾಗಿ ರಥವು ಕರಾವಳಿಗೆ ಕೊಚ್ಚಿ ಹೋಗಿರಬಹುದು ಎಂದು ಗ್ರಾಮಸ್ಥರು ಹೇಳಿದ್ದಾರೆ. ಈ ರಥವನ್ನು ನೋಡಲು ಸುತ್ತಮುತ್ತಲಿನ ಜನರೆಲ್ಲರೂ ಸಮದ್ರದ ದಡದಲ್ಲಿ ಸೇರಿದ್ದಾರೆ.
ಇದನ್ನೂ ಓದಿ : – ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಯೋದಕ್ಕೂ ಶಿಕ್ಷಣ ಇಲಾಖೆಯಲ್ಲಿ ನಡೆಯೋದಕ್ಕು ವ್ಯತ್ಯಾಸ ಇದೆ – ಬಸವರಾಜ್ ರಾಯರೆಡ್ಡಿ