ವಿಧಾನ ಪರಿಷತ್ ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿ ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಜೂನ್ 13 ಕ್ಕೆ ಮತದಾನ ನಡೆಯಲಿದ್ದು, ಬೆಳಗ್ಗೆ 8 ರಿಂದ ಸಂಜೆ 4ರ ವರೆಗೆ ಮತದಾನಕ್ಕೆ ಅವಕಾಶವಿದೆ.
ಜೂನ್ 4 ಕ್ಕೆ ದಕ್ಷಿಣ ಮತ್ತು ವಾಯುವ್ಯ ಪದವೀಧರರ ಕ್ಷೇತ್ರದಲ್ಲಿ ಹನುಮಂತ ನಿರಾಣಿ ಹಾಗೂ ಕೆ.ಟಿ.ಶ್ರೀಕಂಠೇಗೌಡ ಮತ್ತು ವಾಯುವ್ಯ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಅರುಣ್ ಶಹಾಪುರ ಮತ್ತು ಬಸವರಾಜ್ ಹೊರಟ್ಟಿ ಅವರಿಂದ ತೆರವಾಗುವ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.2 ಪದವೀಧರ ಕ್ಷೇತ್ರ, 2 ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದ್ದು, ಮೇ 19 ರಿಂದ ನಾಮಪತ್ರ ಸಲ್ಲಿಕೆ ಪ್ರಾರಂಭವಾಗಲಿದೆ. ಮೇ 26 ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗಿದೆ. ಜೂನ್ 15-17ವರೆಗೆ ಚುನಾವಣೆ ಫಲಿತಾಂಶ ಪ್ರಕ್ರಿಯೆ ನಡೆಯಲಿದೆ. ಇನ್ನು ವಿಧಾನಸಭೆ ಸದಸ್ಯರಿಂದ ಆಯ್ಕೆಯಾಗುವ ವಿಧಾನ ಪರಿಷತ್ 7 ಸ್ಥಾನಗಳಿಗೆ ಜೂನ್ 3 ರಂದು ಮತದಾನ ನಡೆಯಲಿದ್ದು, ಮೇ 27 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಇದನ್ನೂ ಓದಿ : – ಆಸಾನಿಚಂಡಮಾರುತದ ಎಫೆಕ್ಟ್ – ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ
ವಿಧಾನಸಭೆ ಸದಸ್ಯರಿಂದ ಆಯ್ಕೆಯಾದ ವಿಧಾನಪರಿಷತ್ ನ ಏಳು ಮಂದಿ ಸದಸ್ಯರ ಅವಧಿ ಜೂನ್ 14 ಕ್ಕೆ ಮುಕ್ತಾಯಗೊಳ್ಳಲಿದೆ. ಸದಸ್ಯರಾದ ಲಕ್ಷ್ಮಣ ಸವದಿ, ರಾಮಪ್ಪ ತಿಮ್ಮಾಪುರ್, ಅಲ್ಲಮ್ ವೀರಭದ್ರಪ್ಪ, ಎಚ್ ಎಂ ರಮೇಶ್ ಗೌಡ, ವೀಣಾ ಅಚ್ಚಯ್ಯ, ಕೆ.ವಿ ನಾರಾಯಣ ಸ್ವಾಮಿ, ಲೆಹರ್ ಸಿಂಗ್ ಸೇರಿದಂತೆ ಏಳು ಮಂದಿ ಸದಸ್ಯರ ಅವಧಿ ಮುಕ್ತಾಯಗೊಳ್ಳಲಿದೆ. ಈ ಏಳು ಸ್ಥಾನಕ್ಕೆ ಜೂನ್ 3 ಕ್ಕೆ ಮತದಾನ ನಡೆಯಲಿದೆ. ಇದನ್ನೂ ಓದಿ :- ಮತಾಂತರ ನಿಷೇಧ ಕಾಯ್ದೆ ಸುಗ್ರೀವಾಜ್ಞೆ ಮೂಲಕ ಜಾರಿ, ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ- ಸಿಎಂ ಬೊಮ್ಮಾಯಿ