ಮಂಗಳವಾರ ಸುರಿದ ಭಾರೀ ಸುರಿದ ಮಳೆಯ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು ಜನರು ಸಂಕಷ್ಟದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಇವತ್ತು ಕೂಡ ಸಿಟಿ ರೌಂಡ್ಸ್ ಹಾಕಿದ್ರು.
ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ ನಿನ್ನೆ ಮಳೆ ಹಾನಿ ಪರಿಶೀಲನೆ ನಡೆಸಿದ್ರೆ ಇವತ್ತು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಸಿಟಿ ರೌಂಡ್ಸ್ ಹಾಕುವ ಮೂಲಕ ಮಳೆ ಹಾನಿ ಪರಿಶೀಲನೆ ನಡೆಸಿದ್ದಾರೆ. ದಾಸರಹಳ್ಳಿ ವಿಧಾನಸಭೆ ಕ್ಷೇತ್ರದ ನೆಲಗದರನಹಳ್ಳಿ ರಸ್ತೆಯ ರುಕ್ಮಿಣಿನಗರ, ಪೀಣ್ಯ ಕೈಗಾರಿಕಾ ಪ್ರದೇಶದ ಸಿದ್ದಾರ್ಥ ಕಾಲೋನಿ, ರಾಜಗೋಪಾಲ ನಗರದ ಬಸಪ್ಪನ ಕಟ್ಟೆ, ಚಿಕ್ಕಬಾಣಾವರ ಪುರಸಭೆ ಎದರು ಕೆರೆ ವೀಕ್ಷಣೆ ಮಾಡಿದ್ದಾರೆ.
ಮಳೆಯಿಂದ ಹಾನಿಗೊಳಗಾದ ಸಂತ್ರಸ್ತರ ಸಂಕಷ್ಟಗಳನ್ನು ಕೇಳಿದ್ದಾರೆ. ಮೂರು ಪಕ್ಷಗಳ ಸಿಟಿ ರೌಂಡ್ಸ್ ಇದೀಗ ರಾಜಕೀಯ ಆಯಾಮದಲ್ಲಿ ಚರ್ಚೆಗೆ ಗ್ರಾಸವಾಗುತ್ತಿದೆ. ಇದು ರಾಜಕೀಯ ಪಕ್ಷಗಳ ಗಿಮಿಕ್ ಎಂದು ನಾಗರಿಕರು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ :- 8 ವಾರಗಳಲ್ಲಿ ಚುನಾವಣೆ ನಡೆಸುವಂತೆ ಬಿಬಿಎಂಪಿಗೆ ಸುಪ್ರೀಂಕೋರ್ಟ್ ಸೂಚನೆ