ಭಾರತದ ಸ್ವತಂತ್ರ ವಿದೇಶಾಂಗ ನೀತಿಗಳ ಬಗ್ಗೆ ಇತ್ತೀಚೆಗೆ ಮುಕ್ತ ಕಂಠದಿಂದ ಶ್ಲಾಘಿಸಿದ್ದ ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಇದೀಗ ಮತ್ತೆ ನೆರೆ ದೇಶವನ್ನು ಶ್ಲಾಘಿಸಿದ್ದಾರೆ.
ಭಾರತದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಕುರಿತ ವರದಿಯೊಂದರ ತುಣುಕನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಪಾಕಿಸ್ತಾನ ಸರ್ಕಾರವನ್ನು ಟೀಕಿಸಿದ್ದಾರೆ. ಇದನ್ನೂ ಓದಿ : – ಕಾರಿನಲ್ಲಿ ಪೆಟ್ರೋಲ್ ಸುರಿದುಕೊಂಡು ಜೋಡಿ ಆತ್ಮಹತ್ಯೆ!
‘ಕ್ವಾಡ್ ಸದಸ್ಯ ರಾಷ್ಟ್ರವಾದರೂ ಅಮೆರಿಕದ ಒತ್ತಡಕ್ಕೆ ಮಣಿಯದ ಭಾರತವು ರಷ್ಯಾದಿಂದ ರಿಯಾಯಿತಿ ದರದಲ್ಲಿ ತೈಲ ಖರೀದಿಸುವ ಮೂಲಕ ಜನರಿಗೆ ನೆರವಾಗಿದೆ. ಸ್ವತಂತ್ರ ವಿದೇಶಾಂಗ ನೀತಿಯ ಮೂಲಕ ಇಂಥದ್ದೇ ಸಾಧನೆ ಮಾಡಬೇಕೆಂದು ನಮ್ಮ ಸರ್ಕಾರ ಉದ್ದೇಶಿಸಿತ್ತು ಎಂದು ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.‘ನಮ್ಮ ಸರ್ಕಾರಕ್ಕೆ ಪಾಕಿಸ್ತಾನದ ಹಿತಾಸಕ್ತಿಯೇ ಮುಖ್ಯವಾಗಿತ್ತು. ಆದರೆ ದುರದೃಷ್ಟವಶಾತ್, ಸ್ಥಳೀಯ ಮೀರ್ ಜಾಫರ್ ಮತ್ತು ಮೀರ್ ಸಾದಿಕ್ ಬಾಹ್ಯ ಒತ್ತಡದಿಂದ ಸರ್ಕಾರವನ್ನು ಬದಲಾಯಿಸುವ ಷಡ್ಯಂತ್ರ ಮಾಡಿದರು. ಈಗ ಅವರು ದೇಶದ ಆರ್ಥಿಕತೆಯನ್ನು ವಿನಾಶದ ಪ್ರಪಾತಕ್ಕೆ ದೂಡುತ್ತಿದ್ದಾರೆ’ ಎಂದು ಮತ್ತೊಂದು ಟ್ವೀಟ್ನಲ್ಲಿ ಪಾಕಿಸ್ತಾನ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : – ಪತ್ನಿ ಮೇಲೆ ಅನುಮಾನ ಪತಿಯಿಂದಲೇ ಪತ್ನಿ ಕೊಲೆ