ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗದ ವರದಿ ಜಾರಿಗೆ ಆಗ್ರಹಿಸಿ ವಾಲ್ಮೀಕಿ ಪೀಠಾಧ್ಯಕ್ಷ ಪ್ರಸನ್ನನಂದಾಪುರಿ ಸ್ವಾಮೀಜಿ ಮಾಡುತ್ತಿರುವ ಪ್ರತಿಭಟನೆ 108 ನೇ ದಿನಕ್ಕೆ ಕಾಲಿಟ್ಟಿದೆ.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸಿಎಂ ಬೊಮ್ಮಾಯಿ ವಾಲ್ಮೀಕಿ ಪೀಠಾಧ್ಯಕ್ಷ ಪ್ರಸನ್ನನಂದಾಪುರಿ ಸ್ವಾಮೀಜಿ ಆರೋಗ್ಯ ವಿಚಾರಿದ್ದಾರೆ. ನಂತರ ಮಾತನಾಡಿದ ಸಿಎಂ ಬೊಮ್ಮಾಯಿ ಪರಮಪೂಜ್ಯರು ಸಮಾಜದ ಏಳಿಗೆಗಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಇದನ್ನೂ ಓದಿ : – ಸಿದ್ದರಾಮಯ್ಯ ಆರ್ಯರಾ, ದ್ರಾವಿಡರಾ ಅನ್ನೋದನ್ನು ಹೇಳಲಿ ? ಸಿಎಂ ಬೊಮ್ಮಾಯಿ
ಅವರ ಬೇಡಿಕೆಗಳ ಸಂಪೂರ್ಣ ಅರಿವು ನನಗಿದೆ. 50% ಹೆಚ್ಚು ಮೀಸಲಾತಿ ಕೊಡಲು ಆಗುವುದಿಲ್ಲ ಎಂದು ವಿಧಾನಸಭೆಯಲ್ಲಿ ಹೇಳಿದ್ದೆ. ಇರುವ ಕಾನೂನಿನಲ್ಲಿ ಹಾಗೂ ಸುಪ್ರೀಂ ಕೋರ್ಟ್ ಆದೇಶದಂತೆ ಏನೆಲ್ಲಾ ಕೊಡಲು ಸಾಧ್ಯವೋ ಅದನ್ನೆಲ್ಲಾ ನೀಡುತ್ತೇವೆ.
ವರದಿ ಬಂದ ತಕ್ಷಣ ಶೀಘ್ರದಲ್ಲೇ ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಗುರುಗಳ ಆಶೀರ್ವಾದದಿಂದ ಸಮಾಜಕ್ಕೆ ಒಳ್ಳೆಯದಾಗಬೇಕು. ವರದಿ ಆದ್ಮೇಲೆ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ನಾನು ಯಾವುದೇ ಆಶ್ವಾಸನೆ ಕೊಡಲ್ಲ, ವರದಿ ನೋಡಿ ನಾನು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು.
ಇದನ್ನೂ ಓದಿ : – ಕೆಜಿಎಫ್ ಬಾಬು ಮನೆ ಮೇಲೆ ED ರೇಡ್