ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಅಧಿಕೃತವಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ. ಶಿವಕುಮಾರ್ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಹಿರಿಯ ಮುಖಂಡ ಮುಖ್ಯಮಂತ್ರಿ ಚಂದ್ರು ರಾಜ್ಯಸಭೆ ಟಿಕೆಟ್ ನಿರೀಕ್ಷೆಯಲ್ಲಿದ್ದರು. ಆದರೆ ನಿರೀಕ್ಷೆಯಂತೆ ಇವರಿಗೆ ರಾಜ್ಯಸಭೆ ಟಿಕೆಟ್ ಸಿಕ್ಕಿರಲಿಲ್ಲ. ಇದರ ಬೆನ್ನಲ್ಲೆ ವೈಯಕ್ತಿಕ ಕಾರಣಗಳನ್ನು ನೀಡಿ ಪಕ್ಷಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ : – ಕುರುಬರ ಸಮಾವೇಶದಿಂದ ದೂರ ಉಳಿದ ಪರಮೇಶ್ವರ್ – ತುಮಕೂರು ಕಾಂಗ್ರೆಸ್ ನ ಭಿನ್ನಮತ ಬಹಿರಂಗ
ಈ ಬಗ್ಗೆ ಮಾತನಾಡಿದ ಅವರು ಪಕ್ಷಕ್ಕೆ ಪ್ರಾಮಾಣಿಕ ಸೇವೆ ಸಲ್ಲಿಸಿದ್ದೇನೆ. ಸಾಂಸ್ಕೃತಿಕ ಘಟಕದ ಅಧ್ಯಕ್ಷನಾಗಿ ಜವಾಬ್ದಾರಿಯನ್ನು ನಿರ್ವಹಿಸಿದ್ದೇನೆ. ಆದರೂ ಪಕ್ಷ ಗುರುತಿಸಿರಲಿಲ್ಲ ಎಂದು ರಾಜೀನಾಮೆ ನೀಡುವ ಮೂಲಕ ಪರೋಕ್ಷ ಅಸಮಾಧಾನ ತೋರಿದ್ದಾರೆ.
ಇದನ್ನೂ ಓದಿ : – ಬೇಟೆಯಾಡೋ ಹುಲಿಯನ್ನ ಬೋನ್ ನಲ್ಲಿ ಕೂಡಿ ಹಾಕಿದ್ರೂ ಅದು ತನ್ನ ಪ್ರವೃತ್ತಿ ಮರೆಯಲ್ಲ – ಅಪ್ಪನ ನಿರ್ಲಕ್ಷಿಸಿದವರಿಗೆ ವಿಜಯೇಂದ್ರ ತಿರುಗೇಟು