ತುಮಕೂರಿನಲ್ಲಿ ಸಚಿವ ಬಿಸಿ ನಾಗೇಶ್ ಮನೆಗೆ ಕೇಂದ್ರ ವಲಯ ಐಜಿಪಿ ಚಂದ್ರಶೇಖರ್, ತುಮಕೂರು ಎಸ್ಪಿ ರಾಹುಲ್ ಕುಮಾರ್ ಭೇಟಿ ನೀಡಿದ್ದಾರೆ.
ಘಟನೆ ನಡೆದ ಸ್ಥಳವನ್ನ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಿನ್ನೆ ಎನ್ ಎಸ್ ಯು ಐ ದಾಂಧಲೆ ಹಿನ್ನೆಲೆ ಅಧಿಕಾರಿಗಳ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಚಿವ ಬಿ.ಸಿ.ನಾಗೇಶ್ ಮನೆ ಬಳಿ ಮುನ್ನೆಚ್ಚರಿಕಾ ಕ್ರಮವಾಗಿ ಇನ್ನಷ್ಟು ಪೊಲೀಸರನ್ನ ನಿಯೋಜಿಸಲಾಗಿದೆ.
ಈಗಾಗಲೇ 15 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಎಲ್ಲಾ ಕಾರ್ಯಕರ್ತರಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ನ ವಿದ್ಯಾರ್ಥಿ ಘಟಕ – ಎನ್ಎಸ್ಯುಐ ಕಾರ್ಯಕರ್ತರು ಬುಧವಾರ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ಮನೆಯ ಮುಂದೆ ಪ್ರತಿಭಟನೆ ನಡೆಸಿದರು. ಇದನ್ನೂ ಓದಿ : – ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ – ಪ್ರತಿಭಟನಾಕಾರರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ
ಈ ವೇಳೆ ಸಚಿವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ರೋಹಿತ್ ಚಕ್ರತೀರ್ಥ ನೇತೃತ್ವದ ಪಠ್ಯಪುಸ್ತಕ ಪರಿಶೀಲನಾ ಸಮಿತಿಯ ವಿರುದ್ಧ ಎನ್ಎಸ್ ಯುಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅಲ್ಲದೆ ಶಾಲಾ ಪಠ್ಯಪುಸ್ತಕಗಳಲ್ಲಿ ಆರ್ಎಸ್ಎಸ್ ಸಿದ್ಧಾಂತ ಸೇರಿಸಿದ್ದಾರೆ ಎಂದು ಆರೋಪಿಸಿದ್ದರು.
ಇದನ್ನೂ ಓದಿ : – ನಾವಿಬ್ಬರೂ ಒಂದಾಗದೇ ಇದ್ದರೆ ಬಿಜೆಪಿ ಅಭ್ಯರ್ಥಿ ಗೆಲ್ತಾರೆ – ಶರವಣ