ಕಾಶ್ಮೀರದಲ್ಲಿ (Kashmir) ಹಿಂದೂಗಳನ್ನ (Hindu) ಗುರಿಯಾಗಿಸಿಕೊಂಡು ನಡೆಯುತ್ತಿರುವ ಹತ್ಯೆಗಳ ಸರಣಿ ಮುಂದುವರೆದಿದೆ. ಇದು ಕಣಿವೆ ರಾಜ್ಯದಲ್ಲಿ ಆತಂಕ ಮೂಡಿಸಿದೆ.
ಈ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit shah ) ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (Ajith doval) ಅವರನ್ನು ಭೇಟಿಯಾಗಿ ಕಾಶ್ಮೀರದಲ್ಲಿ ನಡೆಯುತ್ತಿರುವ ಉದ್ದೇಶಿತ ಹತ್ಯೆಗಳ ಕುರಿತು ಚರ್ಚಿಸಿದರು. ಪ್ರಧಾನಿ ಕಾರ್ಯಾಲಯದ ಕೇಂದ್ರದ ರಾಜ್ಯ ಸಚಿವ ಡಾ.ಜಿತೇಂದ್ರ ಸಿಂಗ್ (Jitendra singh) ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.ಇಲಾಖಾಹಿ ದೇಹತಿ ಬ್ಯಾಂಕ್ನ ಅರೆಹ್ ಶಾಖೆಗೆ ಭಯೋತ್ಪಾದಕ ನುಗ್ಗಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ (Vijay kumar) ಮೇಲೆ ಗುಂಡು ಹಾರಿಸಿದ್ದ. ಸಿಸಿಕ್ಯಾಮೆರಾ ದೃಶ್ಯಾವಳಿಯಲ್ಲಿ ಹಂತಕ ಶಾಖೆಯೊಳಗೆ ಪ್ರವೇಶಿಸಿ ಗುಂಡು ಹಾರಿಸಿ ಪರಾರಿಯಾಗಿದ್ದ. ಕಳೆದ 6 ತಿಂಗಳಲ್ಲಿ ಸುಮಾರು 17 ಮಂದಿ ಉಗ್ರರು ಟಾರ್ಗೆಟ್ ಆಗಿದ್ದಾರೆ.ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಯಲಿದೆ.ನಾಳಿನ ಸಭೆಯಲ್ಲಿ ಕೇಂದ್ರ ಗೃಹ ಇಲಾಖೆಯ ಉನ್ನತ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಇದನ್ನೂ ಓದಿ : – ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಗೆ ಬಂದರೆ ಸ್ವಾಗತ – ಸಚಿವ ನಾರಾಯಣಗೌಡ