ಯುವ ಕಾಂಗ್ರೆಸ್ (Youth congress ) ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ (Ms .Raksha ramiah) ಅವರನ್ನು ಭಾರತೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ (National secretary) ನೇಮಿಸಲಾಗಿದೆ. ಈ ಬಗ್ಗೆ ಭಾರತೀಯ ಯುವ ಕಾಂಗ್ರೆಸ್ನ ರಾಷ್ಟ್ರೀಯ ಅಧ್ಯಕ್ಷ ಬಿ ವಿ ಶ್ರೀನಿವಾಸ್ (Bv. Srinivas) ಆದೇಶ ಹೊರಡಿಸಿದ್ದಾರೆ.
ಪಕ್ಷ ಸಂಘಟನೆಗಾಗಿ ತಾವು ನಿಮ್ಮ ಪೂರ್ಣ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸುತ್ತೀರಿ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ (Soniya gandhi) ಹಾಗೂ ರಾಹುಲ್ ಗಾಂಧಿ(Rahul gandhi) ಅವರ ಕ್ರಿಯಾಶೀಲ ನಾಯಕತ್ವದಲ್ಲಿ ತಾವು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೀರಿ ಎಂಬ ವಿಶ್ವಾಸವಿದೆ’ ಎಂದು ಶ್ರೀನಿವಾಸ್ ಹೇಳಿದ್ದಾರೆ.ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ, ‘ಪಕ್ಷ ನೀಡಿರುವ ಜವಾಬ್ದಾರಿಯನ್ನು ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಇತ್ತೀಚೆಗೆ ವಿಶೇಷವಾಗಿ ಉದಯಪುರದಲ್ಲಿ ಜರುಗಿದ ಕಾಂಗ್ರೆಸ್ ಚಿಂತನ ಸಮಾವೇಶದಲ್ಲಿ ಕೈಗೊಂಡ ನಿರ್ಣಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ರಾಷ್ಟ್ಟಮಟ್ಟದಲ್ಲಿ ಯುವ ಕಾಂಗ್ರೆಸ್ ಮತ್ತು ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ’ ಎಂದು ಹೇಳಿದ್ದಾರೆ. ಇದನ್ನೂ ಓದಿ : – ಕಲಬುರಗಿಯಲ್ಲಿ ಭೀಕರ ರಸ್ತೆ ದುರಂತ- ನಾಲ್ವರು ಸಜೀವ ದಹನ