ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಇಂದ ಯಾರಿಗೂ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ರು. ಬಿಜೆಪಿ ತನ್ನ ಬಲದಿಂದಲೇ ಗೆಲ್ಲಲಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಇರುವ ಪ್ರಸ್ತಾವನೆಗೂ ನಮಗೂ ಸಂಬಂಧವಿಲ್ಲ ಎಂದು ಹೇಳಿದ್ರು.
ಶೀಘ್ರದಲ್ಲಿಯೇ ಲೋಕಾಯುಕ್ತರ ನೇಮಕ
ಲೋಕಾಯುಕ್ತ ನೇಮಕಾತಿಗೆ ಎಲ್ಲ ಪ್ರಕ್ರಿಯೆ ಮುಗಿದು ಕೊನೆ ಹಂತದಲ್ಲಿದೆ. ಆದಷ್ಟು ಬೇಗನೆ ಲೋಕಾಯುಕ್ತರು ನೇಮಕವಾಗಲಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ರು. ಇದನ್ನೂ ಓದಿ :- ಆರ್ ಬಿಐ ವಿತ್ತೀಯ ನೀತಿ ಪ್ರಕಟ- ರೆಪೊ ದರ 50 ಬೇಸಿಸ್ ಪಾಯಿಂಟ್ ಹೆಚ್ಚಿಸಿ ಶೇ. 4.90ಕ್ಕೆ ಏರಿಕೆ
ತಮಿಳುನಾಡು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡುವಂತಿಲ್ಲ
ತಮಿಳುನಾಡು ಸರ್ಕಾರ ಭಾರತ ಸರ್ಕಾರಕ್ಕೆ ಸೂಚನೆ ನೀಡುವಂತಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ರು. ತಮಿಳುನಾಡು ಸರ್ಕಾರ ಸರ್ವೋಚ್ಛ ನ್ಯಾಯಾಲಯದಲ್ಲಿ ಅಫಿಡವಿಟ್ ಹಾಕಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ತಮಿಳುನಾಡು ಹಾಕಿರುವುದು ಸಮ್ಮಿಶ್ರ ಅರ್ಜಿ. ಸರ್ವೋಚ್ಛ ನ್ಯಾಯಾಲಯ ನಮಗೆ ನೋಟೀಸು ಜಾರಿ ಮಾಡಬೇಕು. ಅದಕ್ಕೆ ನಾವು ಸೂಕ್ತ ರೀತಿಯಲ್ಲಿ ಉತ್ತರ ನೀಡುತ್ತೇವೆ ಎಂದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸರ್ವೋಚ್ಛ ನ್ಯಾಯಾಲಯದ ಆದೇಶದ ಮೇರೆಗೆ ರಚಿಸಲ್ಪಟ್ಟಿರುವ ಸಂಸ್ಥೆಯಾಗಿದೆ. ಯಾವುದೇ ಯೋಜನೆಗೆ ಅನುಮೋದನೆ ನೀಡಲು ಪ್ರಾಧಿಕಾರಕ್ಕೆ ಮಾತ್ರ ಅಧಿಕಾರವಿದೆ. ನ್ಯಾಯಮಂಡಳಿಯ ಆದೇಶ ಪಾಲನೆಯಾಗಿದೆಯೇ, ಯಾವ ರೀತಿ ಆಗಬೇಕು ಎಂದು ಸೂಚಿಸುವ ಅಧಿಕಾರ ಅದಕ್ಕಿದೆ ಎಂದು ಸ್ಪಷ್ಟಪಡಿಸಿದ್ರು.
ಇದನ್ನೂ ಓದಿ :- ನೋಟುಗಳ ಮೇಲೆ ಮಹಾತ್ಮಾ ಗಾಂಧಿ ಚಿತ್ರ ಮುಂದುವರೆಯಲಿದೆ – ಆರ್ ಬಿಐ ಸ್ಪಷ್ಟನೆ