ಬೆಂಗಳೂರಿನಲ್ಲಿ ಮತ್ತೊಂದು ಆ್ಯಸಿಡ್ ದಾಳಿ ಪ್ರಕರಣ ವರದಿಯಾಗಿದ್ದು, ಮದುವೆಯಾಗಲು ನಿರಾಕರಿಸಿದ ಮಹಿಳೆ ಮೇಲೆ ವ್ಯಕ್ತಿ ಆ್ಯಸಿಡ್ ಎರಚಿದ್ದಾನೆ ಎನ್ನಲಾಗಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಸಾರಕ್ಕಿ ಬಳಿ ಈ ಘಟನೆ ನಡೆದಿದ್ದು, ಮಹಿಳೆಯೊಬ್ಬರ ಮೇಲೆ ಆ್ಯಸಿಡ್ ಎರಚಿ ವ್ಯಕ್ತಿ ಪರಾರಿಯಾಗಿದ್ದಾನೆ. ಪರಿಚಯಸ್ಥನೇ ಕೃತ್ಯ ಎಸಗಿರುವ ಶಂಕೆ ಇದೆ. ಮೂಲಗಳ ಪ್ರಕಾರ ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ ವ್ಯಕ್ತಿ ಆಕೆ ನಿರಾಕರಿಸಿದ್ದರಿಂದ ಆಕ್ರೋಶಗೊಂಡು ಸ್ಥಳದಲ್ಲೇ ಆ್ಯಸಿಡ್ ಎರಚಿದ್ದಾನೆ ಎಂದು ತಿಳಿದುಬಂದಿದೆ.
ಕುಮಾರಸ್ವಾಮಿ ಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದ್ದು, ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ‘ಮಹಿಳೆ ಜೊತೆ ವೈಮನಸ್ಸು ಹೊಂದಿದ್ದ ಅಹ್ಮದ್ ಎಂಬಾತ ಆ್ಯಸಿಡ್ ಎರಚಿರುವ ಮಾಹಿತಿ ಇದೆ. ಸದ್ಯ ಮಹಿಳೆ ಆಸ್ಪತ್ರೆಯಲ್ಲಿ ಇದ್ದಾರೆ. ಪ್ರತ್ಯಕ್ಷದರ್ಶಿಗಳು ಹಾಗೂ ಮಹಿಳೆ ಹೇಳಿಕೆ ಪಡೆದು ಮುಂದಿನ ಕ್ರಮ ಜರುಗಿಸಲಾಗುವುದು’ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇದನ್ನೂ ಓದಿ : – ಜೆಡಿಎಸ್ ನಿಂದ ಗೆದ್ದು ಕಾಂಗ್ರೆಸ್ ಗೆ ಮತ ನೀಡಿರುವುದಕ್ಕೆ ಶ್ರೀನಿವಾಸ್ ಗೌಡ ವಿರುದ್ದ ಪ್ರತಿಭಟನೆ
ಇಬ್ಬರೂ ವಿಚ್ಛೇದಿತರು
ಇನ್ನು ಅ್ಯಸಿಡ್ ದಾಳಿಗೆ ತುತ್ತಾದ 32 ವರ್ಷದ ಮಹಿಳೆ ಮತ್ತು ದಾಳಿ ಮಾಡಿದ ವ್ಯಕ್ತಿ ಇಬ್ಬರೂ ವಿಚ್ಛೇದಿತರಾಗಿದ್ದು, ಮಹಿಳೆಗೆ ಮೂರು ಮಕ್ಕಳಿದ್ದರು. ಸಂತ್ರಸ್ಥೆ ಮತ್ತು ಆರೋಪಿ ಇಬ್ಬರು ಅಗರಬತ್ತಿ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಒಂದೂವರೆ ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯು ಮದುವೆಯಾಗಿ ಮಕ್ಕಳನ್ನೂ ಹೊಂದಿದ್ದು, ಎರಡನೇ ಹೆಂಡತಿಯನ್ನು ಹೊಂದಲು ಬಯಸಿದ್ದ. ಹೀಗಾಗಿ ಮಹಿಳೆಯನ್ನು ಮದುವೆಯಾಗುವಂತೆ ಒತ್ತಾಯಿಸುತ್ತಿದ್ದ. ಆದರೆ, ಸಂತ್ರಸ್ತೆ ತನಗೆ ಮಕ್ಕಳಿದ್ದು, ವಿಚ್ಛೇದನ ಪಡೆದಿಲ್ಲ ಎಂದು ನಿರಾಕರಿಸಿದ್ದಾಳೆ. ಈ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆದಿದೆ.
ಇದನ್ನೂ ಓದಿ : – ಶ್ರೀನಿವಾಸ್ ಗೌಡಗೆ ಮಾನ ಮರ್ಯಾದೆ ಇದ್ಯಾ ? – ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ