ದಿ ಪಾರ್ಕ್ ಹೋಟೆಲ್ ನಲ್ಲಿ ಡ್ರಗ್ಸ್ ಪಾರ್ಟಿ ಪ್ರಕರಣದಲ್ಲಿ ಬಂಧಿತ ಬಾಲಿವುಡ್ ನಟ ಸಿದ್ಧಾಂತ್ ಕಪೂರ್ ಸೇರಿ ಐವರಿಗೆ ಸ್ಟೇಷನ್ ಬೇಲ್ ನೀಡಲಾಗಿದೆ.
ಇಂದು ಸಹ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಐವರ ವಿರುದ್ಧ ಹಲಸೂರು ಠಾಣೆಯಲ್ಲಿ ಎನ್ಡಿಪಿಎಸ್ ಕಾಯ್ದೆ 20ಎ, 22ಬಿ, 27ಬಿನಡಿ ಪ್ರಕರಣ ದಾಖಲು ಮಾಡಲಾಗಿದೆ.
ಸಿದ್ಧಾಂತ್ ಕಪೂರ್, ಮೈಂಡ್ ಫೈರ್ ಸೊಲ್ಯೂಷನ್ ಬಿಸಿನೆಸ್ ಮ್ಯಾನೇಜರ್ ಅಖಿಲ್ ಸೋನಿ, ಉದ್ಯಮಿ ಹರ್ ಜೋತ್ ಸಿಂಗ್, ಡಿಜಿಟಲ್ ಮಾರ್ಕೆಟಿಂಗ್ ಉದ್ಯಮಿ ಹನಿ ಹಾಗೂ ಫೋಟೋಗ್ರಾಫರ್ ಅಖಿಲ್ ಮೇಲೆ ಎಫ್ಐಆರ್ ದಾಖಲಾಗಿದೆ.
ಇದನ್ನು ಓದಿ :- ನಟ ಸಿದ್ದಾಂತ್ ಕಪೂರ್ ಡ್ರಗ್ಸ್ ತೆಗೆದುಕೊಂಡಿರೋದು ಸಾಬೀತು – ಡಿಸಿಪಿ ಭೀಮಾಶಂಕರ್ ಗುಳೇದ್ ಸ್ಪಷ್ಟನೆ