ನ್ಯಾಷನಲ್ ಹೆರಾಲ್ಡ್ (National Hearald) ಪತ್ರಿಕೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯದ ಮುಂದೆ ಹಾಜರಾಗಲು ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ (Sonia Gandhi) ಹೆಚ್ಚಿನ ಕಾಲಾವಕಾಶ ಕೋರಿದ್ದಾರೆ.
ಜೂನ್ 23 ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ (ED) ನೋಟಿಸ್ ನೀಡಿತ್ತು. ಇದೀಗ ಇನ್ನೂ ಹೆಚ್ಚಿನ ಸಮಯಾವಕಾಶಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮನವಿ ಮಾಡಿದ್ದಾರೆನ್ನಲಾಗಿದೆ. ಸೋನಿಯಾ ಗಾಂಧಿಯವರಿಗೆ ಕೋವಿಡ್ (covid) ದೃಢಪಟ್ಟ ನಂತರ ಸಂಬಂಧಿತ ಆರೋಗ್ಯ ಸಮಸ್ಯೆಗಳಿಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದ ಅವರನ್ನು ಎರಡು ದಿನಗಳ ಹಿಂದೆ ಡಿಸ್ಚಾರ್ಜ್ ಆಗಿದ್ದಾರೆ. ಜೂನ್ 2 ರಂದು ಸೋನಿಯಾ ಗಾಂಧಿಯವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಜೂನ್ 8 ರಂದು ಇಡಿ ಮುಂದೆ ಹಾಜರಾಗಬೇಕಿದ್ದ ಅವರು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯದಿಂದ (ED) ಹೆಚ್ಚಿನ ಸಮಯವನ್ನು ಕೋರಿದ್ದರು. ಇದನ್ನೂ ಓದಿ : – ಸಂಜೆ 5 ಗಂಟೆ ಸಭೆಗೆ ಎಲ್ಲರೂ ಕಡ್ಡಾಯವಾಗಿ ಹಾಜರಿರಬೇಕು – ಬಂಡಾಯ ಶಾಸಕರಿಗೆ ಶಿವಸೇನೆ ಖಡಕ್ ಎಚ್ಚರಿಕೆ