ಮಹಾರಾಷ್ಟ್ರ ಸರ್ಕಾರ (Maharastra government) ಪತನ ವಿಚಾರ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ(Siddaramiah) ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ಭ್ರಷ್ಟಾಚಾರದ ಹಣದಲ್ಲಿ ಆಪರೇಷನ್ ಕಮಲಕ್ಕೆ ಮುಂದಾಗಿದೆ ಎಂದು ಮೈಸೂರಿನಲ್ಲಿ ಗಂಭೀರ ಆರೋಪ ಮಾಡಿದ್ದಾರೆ.
ಇದು ಪ್ರಜಾಪ್ರಭುತ್ವಕ್ಕೆ ಮಾರಕ. ಕರ್ನಾಟಕದ ಬಿಜೆಪಿಯ ಚಾಳಿ ದೇಶಕ್ಕೆ ಹಬ್ಬಿಸಿದ್ದಾರೆ. ಇದನ್ನು ತಡೆಗಟ್ಟಲು ಪಕ್ಷಾಂತರ ಕಾಯ್ದೆ ತಿದ್ದುಪಡಿ ಆಗಬೇಕು. ಒಂದು ಪಕ್ಷದಿಂದ. ಆಯ್ಕೆಯಾದವನು ಬೇರೆ ಪಕ್ಷಕ್ಕೆ ಹೋಗದಂತೆ ತಡೆಯಬೇಕು.
ಹೋದರೆ 10 ವರ್ಷ ಆತ ಚುನಾವಣೆಗೆ ನಿಲ್ಲದಂತೆ ಆದೇಶ ಮಾಡಬೇಕು. ಪ್ರಜಾಪ್ರಭುತ್ವದ ಉಳಿವಿಗೆ ಇದರ ಅವಶ್ಯಕತೆ ಇದೆ ಎಂದು ಹೇಳಿದ್ದಾರೆ. ಅಪರೇಷನ್ ಕಮಲ ಹುಟ್ಟು ಹಾಕಿದ್ದೇ ಬಿಜೆಪಿಯವರು. 2008ರಲ್ಲಿ ಯಡಿಯೂರಪ್ಪ (Yediyurappa) ಮೊದಲ ಆಪರೇಷನ್ ಕಮಲ ಮಾಡಿದರು. ಎಲ್ಲೂ ಅವರಿಗೆ ಬಹುಮತ ಬಂದಿಲ್ಲ. ಎಲ್ಲಾ ಕಡೆ ಹಣ ಕೊಟ್ಟು ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ ಎಂದು ಕಿಡಿ ಕಾರಿದ್ದಾರೆ.
ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ ವಿಚಾರ
ರಾಷ್ಟ್ರಪತಿ ಹುದ್ದೆಗೆ ಬುಡಕಟ್ಟು ಮಹಿಳೆ ಆಯ್ಕೆ ಸಾಮಾಜಿಕ ನ್ಯಾಯ ಅಲ್ಲ. ವಿಶೇಷವೂ ಅಲ್ಲ. ಸಾಮಾಜಿಕ ನ್ಯಾಯ ಅನ್ನೋದಾದ್ರೆ ಆರ್ ಎಸ್ ಎಸ್ ಮುಖ್ಯ (RSS) ಸರಸಂಚಾಲಕರಾಗಿ ಆಯ್ಕೆ ಮಾಡಲಿ. ಮೋಹನ್ ಭಾಗವತ್ (Mohan bhagvat) ಸ್ಥಾನಕ್ಕೆ ಇಂತಹ ಮಹಿಳೆಯನ್ನು ತರಲಿ. ಆಕೆ ಬಿಜೆಪಿಯವರೇ ಆಗಿದ್ದಾರೆ. ರಾಜ್ಯಪಾಲರು ಸೇರಿ ಹಲವು ಹುದ್ದೆ ಅಲಂಕರಿಸಿದ್ದಾರೆ. ರಾಷ್ಟ್ರಪತಿಯಾಗಿ ಅಂತಹ ಕೆಲಸ ಮಾಡಲು ಇವರು ಬಿಡಲ್ಲ. ಇದನ್ನೂ ಓದಿ : – ನೀವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಿ- ನಾವು ಹೊಸ ಪಕ್ಷ ಕಟ್ಟುತ್ತೇವೆ – ಬಂಡಾಯ ಶಾಸಕರಿಗೆ ರಾವತ್ ನೇರ ಸಂದೇಶ
ಈ ಹಿಂದೆ ರಾಜೇಂದ್ರ ಪ್ರಸಾದ್ (Rajendra prasad) ಅವರು ಮಾಡಿದಂತ ಕೆಲಸ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ. ರಾಮನಾಥ್ ಕೋವಿಂದ್ (Ramnath kovind) ಕೂಡ ರಾಷ್ಟ್ರಪತಿ ಆಗಿದ್ದರು. ಅವರು ಏನು ಮಾಡಿದರು ? ಇದು ಅವರಂತೆ ನಾಮಕವಾಸ್ತೆಗೆ ಮಾಡುತ್ತಿದ್ದಾರೆ ಎಂದು ಹೇಳಿದ್ರು. ಇದನ್ನೂ ಓದಿ : – PRESIDENT ELECTION – ಪ್ರಧಾನಿ ಮೋದಿ ಭೇಟಿ ಮಾಡಿದ NDA ಅಭ್ಯರ್ಥಿ ದ್ರೌಪದಿ ಮುರ್ಮು