ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುತ್ತಿದ್ದು, ಮಲೆನಾಡಿನಲ್ಲೂ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಜೂನ್ 26 ರವರೆಗೆ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗಿನಲ್ಲಿ ಕೂಡ ಮಳೆ ಹೆಚ್ಚಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗೇ, ಉತ್ತರ ಕರ್ನಾಟಕದ ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಕೊಪ್ಪಳ, ಬೆಳಗಾವಿ, ಹಾವೇರಿ, ಹುಬ್ಬಳ್ಳಿ, ಧಾರವಾಡದಲ್ಲಿ ಭಾನುವಾರದವರೆಗೆ ಹಳದಿ ಅಲರ್ಟ್ (Yellow Alert) ಘೋಷಿಸಲಾಗಿದೆ.
ಇದನ್ನೂ ಓದಿ : – ಶಿವಸೇನೆ ಹೆಸರು ಬಳಸದಂತೆ ಶಿಂಧೆಗೆ ಠಾಕ್ರೆ ಸವಾಲ್