ಶಿಂಧೆಸೇನೆ ಬಂಡಾಯದಿಂದ ತತ್ತರಿಸಿರುವ ಮಹಾರಾಷ್ಟ್ರ (MAHARASTRA ) ಅಘಾಡಿ ಸರ್ಕಾರ ಪತನದಂಚು ತಲುಪಿದೆ. ಉದ್ಧವ್ ಠಾಕ್ರೆ ಸರ್ಕಾರ ಉಳಿವಿಗೆ ಎಷ್ಟೇ ಪ್ರಯತ್ನ ಪಟ್ರು ಬಂಡಾಯದ ಬಿಸಿ ತಣ್ಣಗಾಗ್ತಿಲ್ಲ. ಶಿವಸೇನೆ (SHIVASENA )ಕಾರ್ಯಕರ್ತರ ಆಕ್ರೋಶದ ಕಟ್ಟೆ ಒಡೆದಿದ್ದು, ಮುಂಬೈನಲ್ಲಿರುವ ಬಂಡಾಯ ಶಾಸಕರ ಕಚೇರಿಗೆ ನುಗ್ಗಿ ಧ್ವಂಸ ಮಾಡ್ತಿದ್ದಾರೆ. ಹೀಗಾಗಿ ಬಂಡಾಯ ಶಾಸಕರ ಮನೆ ಕಚೇರಿಗಳಿಗೆ ಭದ್ರತೆ ನೀಡಲಾಗಿದ್ದು, ಜು.19ರವರೆಗೆ ಮುಂಬೈನಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಇತ್ತ ಬಂಡಾಯ ಶಾಸಕರೆಲ್ಲರಿಗೂ ಕಾದಿದೆ ಅಂತ ಶಿವಸೇನೆ ನಾಯಕ ಸಂಜಯ್ ರಾವತ್ (SANJAYA RAVATH )ಎಚ್ಚರಿಕೆ ನೀಡಿದ್ದಾರೆ. ಪಕ್ಷಕ್ಕೆ ದ್ರೋಹ ಬಗೆದವರನ್ನು ಬಿಡೋ ಪ್ರಶ್ನೆಯೇ ಇಲ್ಲ ಎಂದು ಗುಡುಗಿದ್ದಾರೆ. 16 ಬಂಡಾಯ ಶಾಸಕರ ವಿರುದ್ಧ ಶಿವಸೇನೆ ಅನರ್ಹತೆ ಅಸ್ತ್ರ ಪ್ರಯೋಗಿಸಿದೆ. ಉದ್ಧವ್ ಸೇನೆಯ ಅನರ್ಹತೆ ಅಸ್ತ್ರಕ್ಕೆ ಪ್ರತಿಯಾಗಿ ಡೆಪ್ಯುಟಿ ಸ್ಪೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಶಿಂಧೆ ಬಣದ ಶಾಸಕರು ಮುಂದಾಗಿದ್ದಾರೆ. ಇದನ್ನೂ ಓದಿ : – ಮಹಾರಾಷ್ಟ್ರದಲ್ಲಿ ಶಿವಸೇನೆ ಇಬ್ಭಾಗ – ಬಾಳ್ ಠಾಕ್ರೆ ಹೆಸರನ್ನು ಯಾರೂ ಬಳಸಕೂಡದು – ಉದ್ಧವ್ ಠಾಕ್ರೆ
ಆದರೆ ಇದನ್ನ ಡೆಪ್ಯುಟಿ ಸ್ಪೀಕರ್ ತಳ್ಳಿಹಾಕಿದ್ದಾರೆ. 16 ರೆಬೆಲ್ಗಳಿಗೆ ಡೆಪ್ಯುಟಿ ಸ್ಪೀಕರ್ ಶೋಕಾಸ್ ನೊಟೀಸ್ ಜಾರಿ ಮಾಡಿದ್ದು, ಉತ್ತರಿಸಲು ಸೋಮವಾರ ಸಂಜೆ 5 ಗಂಟೆಯವರೆಗೂ ಸಮಯ ನೀಡಿದ್ದಾರೆ. ಇತ್ತ ಅತೃಪ್ತ ಶಾಸಕರ ನಾಯಕ ಏಕನಾಥ ಶಿಂಧೆ, ದೇವೇಂದ್ರ ಫಡ್ನವಿಸ್ ಮತ್ತು ಗೃಹ ಸಚಿವ ಅಮಿತ್ ಶಾ (AMITH SHAH_ ರನ್ನು ಭೇಟಿ ಮಾಡಿದ್ದಾರೆ ಎನ್ನಲಾಗ್ತಿದೆ.
ಇದನ್ನೂ ಓದಿ : – ಶಿವಸೇನೆ ಹೆಸರು ಬಳಸದಂತೆ ಶಿಂಧೆಗೆ ಠಾಕ್ರೆ ಸವಾಲ್