ಮುಂಬೈನಲ್ಲಿ ಶನಿವಾರ ಗುಜರಾತ್ ಭಯೋತ್ಪಾದನಾ ನಿಗ್ರಹ ದಳದಿಂದ ಬಂಧನಕ್ಕೊಳಗಾಗಿರುವ ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಡ್ ( Teesta Settlewood )ಅವರನ್ನು ಇಂದು ಅಹಮದಾಬಾದ್ ಕ್ರೈಮ್ ಬ್ರಾಂಚ್ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ. ಆಕೆಯ ವಿರುದ್ಧ ಹೊಸದಾಗಿ ದಾಖಲಾಗಿರುವ ವಂಚನೆ, ಕ್ರಿಮಿನಲ್ ಪಿತೂರಿ ಕೇಸ್ ಗೆ ಸಂಬಂಧಿಸಿದಂತೆ ಅಹಮದಾಬಾದ್ ಅಪರಾಧ ವಿಭಾಗದ ಪೊಲೀಸರ ವಶಕ್ಕೆ ನೀಡಲಾಗಿದೆ.
ಅಪರಾಧ ವಿಭಾಗದ ಸಬ್ ಇನ್ಸ್ ಪೆಕ್ಟರ್ ಡಿ. ಬಿ. ಬರಾದ್ ದಾಖಲಿಸಿದ ದೂರಿನ ಆಧಾರದ ಮೇಲೆ ಅಹಮದಾಬಾದ್ ಅಪರಾಧ ವಿಭಾಗದಲ್ಲಿ ಆಕೆಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಇಲ್ಲಿಗೆ ಅವರನ್ನು ಕರೆತಂದ ನಂತರ ಇಂದು ಬೆಳಗ್ಗೆ ನಗರ ಅಪರಾಧ ವಿಭಾಗದ ಪೊಲೀಸರ ವಶಕ್ಕೆ ಹಸ್ತಾಂತರಿಸಲಾಗಿದೆ. ಶೀಘ್ರದಲ್ಲೇ ಅವರನ್ನು ಬಂಧನಕ್ಕೊಳಪಡಿಸಲಾಗುವುದು ಎಂದು ಅಪರಾಧ ವಿಭಾಗದ ಮೂಲಗಳು ತಿಳಿಸಿವೆ.
ಇದನ್ನೂ ಓದಿ : – ಶಿವಸೇನಾ ಬಂಡಾಯ ಶಾಸಕರಿಗೆ ‘ವೈ ಪ್ಲಸ್’ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ