ಮಹಾರಾಷ್ಟ್ರ ಬಿಕ್ಕಟ್ಟು- ಏಕನಾಥ್ ಶಿಂಧೆ ಟೀಂನ ಅನರ್ಹತೆ ನೊಟೀಸ್- ಇಂದು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ವಿಚಾರಣೆ

ಮಹಾರಾಷ್ಟ್ರ ಸರ್ಕಾರ ರಾಜಕೀಯ ಕ್ಷಣಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಬಂಡಾಯ ನಾಯಕ ಏಕನಾಥ್ ಶಿಂಧೆ ( Eknath Shinde ) ಸೇರಿದಂತೆ 16 ಮಂದಿಗೆ ಉಪ ಸ್ಪೀಕರ್ ನೀಡಿರುವ ಅನರ್ಹತೆ ನೋಟಿಸ್ ವಿರುದ್ಧ ಶಿವಸೇನೆಯ ಬಂಡಾಯ ಶಾಸಕರು ಸುಪ್ರೀಂ ಕೋರ್ಟ್ (suprem court ) ಮೆಟ್ಟಿಲೇರುವುದರೊಂದಿಗೆ ಮಹಾರಾಷ್ಟ್ರ(MAHARASTRA )ದಲ್ಲಿ ನಡೆಯುತ್ತಿರುವ ಅಧಿಕಾರದ ಹೋರಾಟ ಸುಪ್ರೀಂ ಕೋರ್ಟ್ ಅಂಗಳಕ್ಕೆ ಬಂದು ತಲುಪಿದೆ.


ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರ ರಜಾಕಾಲದ ಪೀಠ ಶಿಂಧೆ ಅವರ ಅರ್ಜಿಯ ವಿಚಾರಣೆ ನಡೆಸಲಿದೆ. ಡೆಪ್ಯೂಟಿ ಸ್ಪೀಕರ್ ನೀಡಿರುವ ನೋಟಿಸ್ ವಿರುದ್ಧ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಏಕನಾಥ್ ಶಿಂಧೆ ಟೀಂ ಎರಡು ಅರ್ಜಿ ಸಲ್ಲಿಕೆ ಮಾಡಿದ್ದು, ಇನ್ನು ಸ್ವಲ್ಪ ಹೊತ್ತಿನಲ್ಲಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಆರಂಭವಾಗಲಿದೆ. ಇದನ್ನೂ ಓದಿ : – ಶಿವಸೇನಾ ಬಂಡಾಯ ಶಾಸಕರಿಗೆ ‘ವೈ ಪ್ಲಸ್’ ಭದ್ರತೆ ಒದಗಿಸಿದ ಕೇಂದ್ರ ಸರ್ಕಾರ


ವಕೀಲ ಹರೀಶ್ ಸಾಳ್ವೆ ಶಿಂಧೆ ಪರ ವಾದ ಮಾಡಲಿದ್ದಾರೆ. ಇಂದು ಸಂಜೆಯೊಳಗೆ ಉತ್ತರಿಸಲು ಡೆಪ್ಯೂಟಿ ಸ್ಪೀಕರ್ ನೋಟಿಸ್. ಉಪ ಸಭಾಧ್ಯಕ್ಷ ನರಹರಿ ಝಿರ್ವಾಲ್ ಶನಿವಾರ ನೋಟಿಸ್ ನೀಡಿದ್ದು, ಶಿಂಧೆ ನೇತೃತ್ವದ್ದೇ ನಿಜವಾದ ಶಿವಸೇನೆ ಎಂದು 2ನೇ ಅರ್ಜಿ ಸಲ್ಲಿಸಲಾಗಿದೆ. ಉದಯ್ ಸಾಮಂತ್ ಎರಡನೇ ಅರ್ಜಿ ಸಲ್ಲಿಕೆ ಮಾಡಿದ್ದು, ಸುಪ್ರೀಂ ಕೋರ್ಟ್ ನತ್ತ ಮಹಾರಾಷ್ಟ್ರ ಸರ್ಕಾರದ ಭವಿಷ್ಯದ ಚಿತ್ತ ನೆಟ್ಟಿದೆ. ಈ ಮಧ್ಯೆ ಇಂದು ಮಧ್ಯಾಹ್ನ 2 ಗಂಟೆಗೆ ಬಂಡಾಯ ನಾಯಕ ಏಕನಾಥ್ ಶಿಂಧೆ ಗುವಾಹಟಿಯ ಹೊಟೇಲ್ ನಲ್ಲಿ ಸಭೆ ಕರೆದಿದ್ದು ಅಲ್ಲಿ ತಮ್ಮ ಬೆಂಬಲಿಗರೊಂದಿಗೆ ಮುಂದಿನ ಕ್ರಮ ಹಾಗೂ ಕಾರ್ಯತಂತ್ರಗಳ ಕುರಿತು ಚರ್ಚೆ ನಡೆಸಲಿದ್ದಾರೆ.

ಇದನ್ನೂ ಓದಿ : – ಶಿವಸೇನೆ ಹೆಸರು ಬಳಸದಂತೆ ಶಿಂಧೆಗೆ ಠಾಕ್ರೆ ಸವಾಲ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!