ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ (PAVITHRA LOKESH ) ಅವರ ವೈಯಕ್ತಿಕ ಜೀವನದ ಕುರಿತಾಗಿ ಅಂತೆ-ಕಂತೆ ಕಥೆಗಳು ಕೇಳಿ ಬರುತ್ತಿವೆ.
ಅದರಲ್ಲೂ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎನ್ನಲಾಗಿದೆ. ಅವರು ತೆಲುಗಿನ ಖ್ಯಾತ ನಟ ನರೇಶ್ (NAREESH ) ಅವರೊಂದಿಗೆ ಮದುವೆ ಕೂಡ ಆಗಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅವಹೇಳನಕಾರಿ ಬರೆಯಲಾಗುತ್ತಿದೆ ಎಂದು ಮೈಸೂರಿನಲ್ಲಿ ಸೈಬರ್ ಕ್ರೈಮ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಪವಿತ್ರಾ ಲೋಕೇಶ್ ಅವರ ಹೆಸರಿನಲ್ಲೂ ಕೆಲವರು ನಕಲಿ ಖಾತೆಗಳನ್ನು ತೆರೆದಿದ್ದಾರಂತೆ. ಇದನ್ನೂ ಓದಿ :- ಹಿರಿಯ ನಟಿ ಪವಿತ್ರಾ ಲೋಕೇಶ್ ಮತ್ತೊಂದು ಮದುವೆಯಾಗಿದ್ದಾರಂತೆ…!
ಆ ಖಾತೆಗಳಲ್ಲಿ ಕಳೆದ ಎರಡು ವರ್ಷಗಳಿಂದ ಪತಿ ಸುಚೇಂದ್ರ ಪ್ರಸಾದ್ ಅವರ ಜೊತೆ ಪವಿತ್ರಾ ಲೋಕೇಶ್ ಇಲ್ಲವೆಂದು , ನರೇಶ್ ಅವರ ಜೊತೆ ಲೀವ್ ಇನ್ ಸಂಬಂಧ ಹೊಂದಿದ್ದಾರೆ ಎಂದು ಸುಳ್ಳು ಸುದ್ದಿಗಳನ್ನು ಪ್ರಕಟಿಸುತ್ತಿದ್ದಾರಂತೆ. ಈ ಕುರಿತೂ ಅವರ ಸೈಬರ್ ಠಾಣೆಗೆ ದೂರು ದಾಖಲಿಸಿದ್ದಾರೆ. ಮೈಸೂರಿನ ಸೈಬರ್ ಪೊಲೀಸರು ಎಫ್ಐಆರ್ (FIR ) ದಾಖಲಿಸಿದ್ದಾರೆ.
ಇದನ್ನೂ ಓದಿ :- ಜೂ.23ಕ್ಕೆ ಸುದೀಪ್ ನಟನೆಯ ‘ವಿಕ್ರಾಂತ್ ರೋಣ’ ಟ್ರೈಲರ್ ಬಿಡುಗಡೆ