ರಾಯಚೂರು (RAICHURU) ಜಿಲ್ಲೆಯ ಮಾನ್ವಿ ತಾಲೂಕಿನ ನೀರಮಾನ್ವಿಯಲ್ಲಿ ಕಳೆದ ಆರು ತಿಂಗಳಿಂದ ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆಯು ಇದೀಗ ಅರಣ್ಯ ಇಲಾಖೆ ಅಧಿಕಾರಿಗಳ ಕಣ್ಣಿಗೆ ಬಿದ್ದಿದೆ. ಆರು ತಿಂಗಳ ಹಿಂದೆ ಗ್ರಾಮದ ಬೆಟ್ಟದಲ್ಲಿ ಚಿರತೆ ಕಂಡ ಬಗ್ಗೆ ಗ್ರಾಮಸ್ಥರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ದೂರು ನೀಡಿದ್ದರು.
ಬೆಟ್ಟದಲ್ಲಿ ಚಿರತೆಯ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದವು. ಆದರೆ ಚಿರತೆ ನಾಪತ್ತೆಯಾಗಿತ್ತು. ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ ನಾಯಕ ಮತ್ತು ಸಿಬ್ಬಂದಿ ಚಿರತೆಯನ್ನು ಸೆರೆ ಹಿಡಿಯಲು ನಿರಂತರ ಪ್ರಯತ್ನ ನಡೆಸಿದ್ದರೂ, ಅವರಿಗೆ ಚಿರತೆ ಪ್ರತ್ಯಕ್ಷವಾಗಿ ಕಂಡಿರಲಿಲ್ಲ. ಇದನ್ನೂ ಓದಿ :- ಇಂದು ಆಷಾಢ ಮಾಸದ ಮೊದಲ ಶುಕ್ರವಾರ – ಚಾಮುಂಡಿ ಬೆಟ್ಟಕ್ಕೆ ಹರಿದು ಬಂದ ಭಕ್ತ ಸಾಗರ
ಆದರೂ ಶೋಧ ಕಾರ್ಯಾಚರಣೆ ಮುಂದುವರಿಸಿದ್ದರು. ಇದೇ ಮೊದಲ ಬಾರಿಗೆ ಚಿರತೆ ಅರಣ್ಯ ಇಲಾಖೆಯ ಸಿಬ್ಬಂದಿಯ ಕಣ್ಣಿಗೆ ಬಿದ್ದಿದೆ. ಈ ಕುರಿತು ಅರಣ್ಯ ಇಲಾಖೆಯ ಮೇಲಧಿಕಾರಿಗಳ ಗಮನಕ್ಕೆ ತಂದಿದ್ದು ಚಿರತೆಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಚುರುಕುಗೊಳಿಸಲಾಗಿದೆ.
ಇದನ್ನೂ ಓದಿ :- ಡಿ.ಕೆ.ಶಿವಕುಮಾರ್ ಗೆ ಮತ್ತೆ ED ಕಂಟಕ