ಕೇಳರದ ಆಡಳಿತಾರೂಢ ಸಿಪಿಐ(ಎಂ) ನ ರಾಜ್ಯ ಪ್ರಧಾನ ಕಚೇರಿಯನ್ನ ಗುರುವಾರ ತಡರಾತ್ರಿ ಬಾಂಬ್ ಎಸೆದು ಸ್ಫೋಟಿಸಲಾಗಿದೆ. ಪಕ್ಷದ ಕಚೇರಿಯ ಮುಖ್ಯ ಗೇಟ್ ಮುಂದೆ ಬಾಂಬ್ ಸ್ಫೋಟಗೊಂಡಿದೆ. ಬಾಂಬ್ ಸ್ಫೋಟಗೊಳ್ಳುತ್ತಿದ್ದಂತೆ ಪಕ್ಷದ ಹಿರಿಯ ನಾಯಕರು ಕಚೇರಿ ಬಳಿ ಧಾವಿಸಿದರು.
ದಾಳಿಯ ವೇಳೆ ಹಲವು ಸಿಪಿಐ(ಎಂ) ಮುಖಂಡರು ಪಕ್ಷದ ಕಚೇರಿ ಬಳಿಯ ಅಪಾರ್ಟ್ಮೆಂಟ್ ನಲ್ಲಿದ್ದರು ಎಂದು ಮೂಲಗಳು ತಿಳಿಸಿವೆ. ದ್ವಿಚಕ್ರ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ಬಾಂಬ್ ಎಸೆದು ಪರಾರಿಯಾಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ಸಂಬಂಧ ವರದಿ ಸಲ್ಲಿಸುವ ಸಮಯದಲ್ಲಿ ಪೊಲೀಸರಿಂದ ಯಾವುದೇ ಅಧಿಕೃತ ಹೇಳಿಕೆ ಇರಲಿಲ್ಲ. ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿರುವ ಬಗ್ಗೆ ವರದಿಯಾಗಿಲ್ಲ.
ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಘಟನಾ ಸ್ಥಳ ಮತ್ತು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಬಾಂಬ್ ನಿಷ್ಕ್ರಿಯ ದಳ ಸಹ ತಪಾಸಣೆ ನಡೆಸಿದೆ.
ಇದನ್ನೂ ಓದಿ :- ಅಬ್ಬಾಬ್ಬ..! ಬಂಗಾರ ಬಲು ಭಾರ – ಆಮದು ತೆರಿಗೆ ಶೇ. 7.5 ರಿಂದ ಶೇ. 12.5ಕ್ಕೆ ಏರಿಕೆ