ರಾಜ್ಯದ ಕೆಲ ಜಿಲ್ಲೆಗಳಲ್ಲಿ ವರುಣನ ಆರ್ಭಟಕ್ಕೆ ಮುಂದುವರಿದಿದೆ. ಅರಬ್ಬೀಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಪರಿಣಾಮ ಜುಲೈ 5ರವರೆಗೆ ಅಂದರೆ ಮುಂದಿನ 3 ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಚಿಕ್ಕಮಗಳೂರು, (chikkamagaluru) ಶಿವಮೊಗ್ಗ ಸೇರಿದಂತೆ ಪಶ್ಚಿಮ ಘಟ್ಟದಲ್ಲಿಯೂ ಭಾರೀ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದ್ದು, ಆರೆಂಜ್ ಅಲರ್ಟ್ (orange alert ) ನೀಡಲಾಗಿದೆ. ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ಕೊಟ್ಟಿದ್ದಾರೆ. ಬೆಂಗಳೂರಿ(bangalore) ನಲ್ಲೂ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಮಧ್ಯೆ, ದೇಶದಲ್ಲಿ ಕಳೆದ 2 ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಜೂನ್ ತಿಂಗಳಲ್ಲಿ ಶೇ.8ರಷ್ಟು ಮುಂಗಾರು ಕೊರತೆಯಾಗಿದೆ. ಕೇರಳ, ಕರ್ನಾಟಕ, ಮಹಾರಾಷ್ಟ್ರ, ದೆಹಲಿಯಲ್ಲೀ ಜೂನ್ನಲ್ಲಿ ಕಡಿಮೆ ಮಳೆ ಆಗಿದೆ.
ಇದನ್ನೂ ಓದಿ : – ಪೌರಕಾರ್ಮಿಕರ ಬೇಡಿಕೆ ಈಡೇರಿಕೆಗೆ ಕ್ರಮ- ಸಿಎಂ ಬೊಮ್ಮಾಯಿ