ಹಾಲಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು (Venkaiah Naidu) ಅವರ ಅವಧಿ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ (Vice President Election) ನಡೆಯಲಿದೆ.
ಎನ್ ಡಿ ಎ ಅಭ್ಯರ್ಥಿಯಾಗಿ ಕಳೆದ ವರ್ಷ ಕಾಂಗ್ರೆಸ್ ತೊರೆದಿದ್ದ ಅಮರಿಂದರ್ ಸಿಂಗ್ (Amarinder Singh) ಎನ್ಡಿಎ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿಯಾಗುವ (NDA Vice Presidential Candidate) ಸಾಧ್ಯತೆಯಿದೆ ಎನ್ನಲಾಗಿದೆ.
ಕಳೆದ ವರ್ಷ ಕಾಂಗ್ರೆಸ್ ತೊರೆದಿದ್ದ ಅಮರಿಂದರ್ ಸಿಂಗ್ ಶೀಘ್ರದಲ್ಲೇ ಬಿಜೆಪಿ ಸೇರುವ ಸಾಧ್ಯತೆ ಇದೆ 80 ವರ್ಷದ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಬೆನ್ನು ಶಸ್ತ್ರಚಿಕಿತ್ಸೆ ಪಡೆಯಲು ಸದ್ಯ ಲಂಡನ್ನಲ್ಲಿದ್ದಾರೆ. ಮುಂದಿನ ವಾರ ಭಾರತಕ್ಕೆ ಹಿಂದಿರುಗಿದ ನಂತರ ಅವರು ತಮ್ಮ ಪಂಜಾಬ್ ಲೋಕ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಸಾಧ್ಯತೆಯಿದೆ. ಅಮರೀಂದರ್ ಸಿಂಗ್ ಎರಡು ಬಾರಿ ಪಂಜಾಬ್ ಸಿಎಂ ಆಗಿದ್ದರು.
ಇದನ್ನೂ ಓದಿ : – ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆಯನ್ನು ಶಿವಸೇನೆಯಿಂದ ವಜಾಗೊಳಿಸಿದ ಉದ್ಧವ್ ಠಾಕ್ರೆ