ಬಂಟ್ವಾಳದಲ್ಲಿ ಮನೆ ಮೇಲೆ ಕುಸಿದ ಗುಡ್ಡದ ಮಣ್ಣು – ಮೂವರು ಕಾರ್ಮಿಕರು ದುರ್ಮರಣ

ನಿರಂತರ ಮಳೆಗೆ ಬಂಟ್ವಾಳ (Bantwala) ತಾಲೂಕಿನ ಪಂಜಿಕಲ್ಲು (Panjikallu) ಗ್ರಾಮದ ನೇಲ್ಯಪಲ್ಕೆ ಪಕ್ಕದ ಮುಕ್ಕುಡ ಬಳಿ ಕಳೆದ ರಾತ್ರಿ ಭೂಕುಸಿತ ಉಂಟಾಗಿದೆ.

ಮನೆಯೊಂದರ ಮೇಲೆ ಗುಡ್ಡದ ಮಣ್ಣು ಜರಿದು ಕೇರಳ (Kerala) ಮೂಲದ ಮೂವರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಕೊಟ್ಟಾಯಂನ ಬಾಬು, ಪಾಲಕ್ಕಾಡು ನಿವಾಸಿ ಬಿಜು (46), ಅಲಪ್ಪುಳದ ಸಂತೋಷ್ (46) ಸಾವಿಗೀಡಾದ ಕಾರ್ಮಿಕರು. ಕಣ್ಣೂರಿನ ಜಾನಿ ಬದುಕುಳಿದಿದ್ದು ಚಿಕಿತ್ಸೆ ನಡೆಯುತ್ತಿದೆ.  ಇದನ್ನು ಓದಿ :- ಕರಾವಳಿ, ಕೊಡಗು,ಭಾಗಗಳಲ್ಲಿ ಮಳೆ ಶಾಲಾ ಕಾಲೇಜುಗಳಿಗೆ ರಜೆ ಮುಂದುವರಿಕೆ

ಘಟನೆ ನಡೆದ ಕೂಡಲೇ ಸ್ಥಳೀಯರು ವಿಪತ್ತು ನಿರ್ವಹಣಾ ಪ್ರಾಧಿಕಾರಕ್ಕೆ ಸುದ್ದಿ ಮುಟ್ಟಿಸಿ ಕಾರ್ಯಾಚರಣೆ ನಡೆಸಿದ್ದಾರೆ. ರಾತ್ರಿ 9.30ರ ವೇಳೆಗೆ ಮೂವರು ಗಾಯಾಳು ಕಾರ್ಮಿಕರನ್ನು ಅವಶೇಷಗಳಿಂದ ಹೊರತೆಗೆಯಲಾಗಿದೆ. ನಿರಂತರವಾಗಿ ಸುರಿಯುತ್ತಿದ್ದ ಮಳೆ ರಕ್ಷಣಾ ಕಾರ್ಯಕ್ಕೆ ಅಡ್ಡಿಪಡಿಸಿತ್ತು. ಇದನ್ನು ಓದಿ :- ಕರಾವಳಿ ಭಾಗದಲ್ಲಿ ಮುಂದುವರಿದ ಧಾರಾಕಾರ ಮಳೆ- ದಕ್ಷಿಣ ಕನ್ನಡದಲ್ಲಿ ರೆಡ್ ಅಲರ್ಟ್ ಘೋಷಣೆ, ಶಾಲಾ-ಕಾಲೇಜುಗಳಿಗೆ ರಜೆ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!