ಲಂಕಾ ಅಧ್ಯಕ್ಷರ ಮನೆಯಲ್ಲಿ ಪ್ರತಿಭಟನಾಕಾರರಿಗೆ ಸಿಕ್ತು ಲಕ್ಷ ಲಕ್ಷ ಹಣ

ದೇಶದ ಅತ್ಯಂತ ಭೀಕರ ಆರ್ಥಿಕ ಬಿಕ್ಕಟ್ಟಿನ ಮಧ್ಯೆ ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ( Gotabaya Rajapakse ) ಅವರ ಮನೆಗೆ ಮುತ್ತಿಗೆ ಹಾಕಿದ ಪ್ರತಿಭಟನಾಕಾರರು, ನಿವಾಸದಲ್ಲಿ ದೊಡ್ಡ ಮೊತ್ತದ ಹಣವನ್ನು ಪತ್ತೆ ಹಚ್ಚಿದ್ದಾರೆ.

ಪ್ರತಿಭಟನಾಕಾರರು ಶ್ರೀಲಂಕಾ ಅಧ್ಯಕ್ಷರ ಮನೆಯಲ್ಲಿ ಲಕ್ಷಾಂತರ ರೂ. ಹಣವನ್ನು ಪತ್ತೆ ಮಾಡಿದ್ದಾರೆ. ಹಣವನ್ನು ತೆಗೆದುಕೊಂಡು ಎಣಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 1.78 ಲಕ್ಷ ರೂ. ಪ್ರತಿಭಟನಾಕಾರರಿಗೆ ಸಿಕ್ಕಿತ್ತು. ನಂತರ ಅದನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ರಾಜಪಕ್ಸೆ ಮನೆತನದ ಆಡಳಿತ ವಿರೋಧಿಸಿ ಶ್ರೀಲಂಕಾ (sri lanka) ಜನತೆ ವ್ಯಾಪಕ ಪ್ರತಿಭಟನೆ ನಡೆಸುತ್ತಿದ್ದಾರೆ. ಆಕ್ರೋಶಿತ ಜನಸಮೂಹ ಶನಿವಾರ ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರ ನಿವಾಸಕ್ಕೆ ಲಗ್ಗೆಯಿಟ್ಟು ದಾಂಧಲೆ ಸೃಷ್ಟಿಸಿದರು. ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಾಡಿದರು.

ಅಡುಗೆ ಕೋಣೆಯಲ್ಲಿನ ತಿಂಡಿ-ತಿನಿಸು ತಿಂದರು. ಹಾಸಿಗೆಯಲ್ಲಿ ಬಿದ್ದು ಹೊರಳಾಡಿದರು. ಇದೇ ವೇಳೆ ಪ್ರತಿಭಟನಾಕಾರರು ರಾಜಪಕ್ಸೆ ಅವರ ತಿಜೋರಿಯನ್ನೂ ಪತ್ತೆ ಹಚ್ಚಿ ಹಣವನ್ನು ತೆಗೆದುಕೊಂಡಿದ್ದಾರೆ. ಹಣವನ್ನು ತೆಗೆದುಕೊಂಡು ಎಣಿಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. 1.78 ಲಕ್ಷ ರೂ. (17.8 ಮಿಲಿಯನ್ ಶ್ರೀಲಂಕನ್ ರುಪಿ) ಪ್ರತಿಭಟನಾಕಾರರಿಗೆ ಸಿಕ್ಕಿತ್ತು. ನಂತರ ಅದನ್ನು ಭದ್ರತಾ ಸಿಬ್ಬಂದಿಗೆ ಒಪ್ಪಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಇದನ್ನೂ ಓದಿ : –  ಲಂಕಾ ಅಧ್ಯಕ್ಷರ ಅರಮನೆಯಲ್ಲೀಗ ಪ್ರಜೆಗಳ ಸಾಮ್ರಾಜ್ಯ – ಊಟ, ಜಿಮ್ ಮಾಡುತ್ತಾ ಎಂಜಾಯ್ ಮಾಡಿದ ಜನರು

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!