ಬಿಬಿಎಂಪಿ (BBMP) ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ (Plastic use) ಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ದಾಳಿ ಮಾಡಿ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ.
ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಬರುವ ಎಲ್ಲಾ ವಾರ್ಡ್ ಗಳಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವ ಕಾರ್ಯವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಘನತ್ಯಾಜ್ಯ ವಿಭಾಗದಿಂದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಇದನ್ನೂ ಓದಿ : – ಕಲಬುರಗಿಯಲ್ಲಿ ನಗರ ಸಭೆ ಅಧ್ಯಕ್ಷೆ ಪತಿಯ ಬರ್ಬರ ಹತ್ಯೆ
ಅದರಂತೆ ಪಾಲಿಕೆಯ ಕಿರಿಯ ಆರೋಗ್ಯ ಪರಿವೀಕ್ಷಕರು, ಮಾರ್ಷಲ್ ಗಳು ಸಗಟು ವ್ಯಾಪಾರ ಮಳಿಗೆಗಳು, ಅಂಗಡಿಗಳ ಮೇಲೆ ದಾಳಿ ನಡೆಸುತ್ತಿದ್ದಾರೆ. ಹೋಟೆಲ್ ಉದ್ದಿಮೆ, ಪ್ಲಾಸ್ಟಿಕ್ ಉತ್ಪಾದಿಸುವ ಉದ್ದಿಮೆಗಳಿಗೆ ಭೇಟಿ ನೀಡಿ ಪ್ಲಾಸ್ಟಿಕ್ ಜಪ್ತಿ ಮಾಡುವುದರ ಜೊತೆಗೆ ದಂಡ ವಿಧಿಸುತ್ತಿದ್ದಾರೆ. ಮತ್ತೊಮ್ಮೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ : – ಶೀಘ್ರದಲ್ಲೇ ಕಾಂಗ್ರೆಸ್ `ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಸಾಧನೆ’ ಎಂಬ ಪುಸ್ತಕ ಬಿಡುಗಡೆ ಮಾಡಲಿದೆ –ಕಾಲೆಳೆದ ಬಿಜೆಪಿ