18 ರಿಂದ 59 ವರ್ಷದವರೆಗಿನ ದೇಶದ ಎಲ್ಲಾ ನಾಗರಿಕರಿಗೆ ಕೇಂದ್ರ ಸರ್ಕಾರ ಇಂದು ಉಚಿತ ಬೂಸ್ಟರ್ ಡೋಸ್ (booster dose) ನೀಡಲಿದೆ. ಇದು 75 ದಿನಗಳ ವಿಶೇಷ ಕೋವಿಡ್ ( covied ) ಲಸಿಕೆ ಅಭಿಯಾನದ ಭಾಗವಾಗಿದೆ.
ದೇಶಕ್ಕೆ ಸ್ವಾತಂತ್ಯ ಸಿಕ್ಕಿ 75 ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ( centerl goverment ) ವರ್ಷವಿಡೀ ಆಜಾದ್ ಕಿ ಅಮೃತ ಮಹೋತ್ಸವ ಸಂಭ್ರಮಾಚರಣೆ ಮಾಡುತ್ತಿದ್ದು ಇದರ ಅಂಗವಾಗಿ ಮುಂದಿನ 75 ದಿನಗಳವರೆಗೆ ಉಚಿತ ಬೂಸ್ಟರ್ ಡೋಸ್ ನ್ನು ನೀಡುತ್ತಿದೆ. ಇದನ್ನು ಓದಿ : – ಲಲಿತ್ ಮೋದಿ ಜೊತೆ ಸುಶ್ಮಿತಾ ಸೇನ್ ಡೇಟಿಂಗ್
ಜುಲೈ 15ರಿಂದ 75 ದಿನಗಳ ಕಾಲ ಆಜಾದ್ ಕಿ ಅಮೃತ ಮಹೋತ್ಸವ ಕಾರ್ಯಕ್ರಮದಡಿಯಲ್ಲಿ ಉಚಿತ ಕೋವಿಡ್ ಲಸಿಕೆ ಅಭಿಯಾನ ಕೈಗೊಳ್ಳುತ್ತಿದ್ದು 18 ವರ್ಷಕ್ಕಿಂತ ಮೇಲ್ಪಟ್ಟ ದೇಶದ ಎಲ್ಲಾ ನಾಗರಿಕರಿಗೆ ಸರ್ಕಾರಿ ಕೇಂದ್ರಗಳಲ್ಲಿ ಉಚಿತ ಬೂಸ್ಟರ್ ಡೋಸ್ ನ್ನು ನೀಡಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ (Mansukh Mandaviya ) ಟ್ವೀಟ್ ಮೂಲಕ ತಿಳಿಸಿದ್ದಾರೆ.
ಎಲ್ಲಾ ಅರ್ಹ ಫಲಾನುಭವಿಗಳು ಬೂಸ್ಟರ್ ಡೋಸ್ ಪಡೆದುಕೊಳ್ಳಿ ಎಂದು ಹೇಳಿರುವ ಆರೋಗ್ಯ ಸಚಿವರು, ಈ ಮೂಲಕ ಕೋವಿಡ್ ವಿರುದ್ಧದ ಭಾರತದ ಹೋರಾಟ ಮತ್ತಷ್ಟು ಬಲಿಷ್ಟವಾಗಲಿದ್ದು, ನಾಗರಿಕರ ಆರೋಗ್ಯಕ್ಕೆ ಹೆಚ್ಚು ರಕ್ಷಣೆ ಸಿಗಲಿದೆ. ಎಲ್ಲಾ ವಯಸ್ಕ ನಾಗರಿಕರು ಇದರ ಸದುಪಯೋಗಪಡೆದುಕೊಳ್ಳಿ ಎಂದು ಮನವಿ ಮಾಡಿಕೊಂಡಿದ್ದಾರೆ.
ಇದನ್ನು ಓದಿ : – ಡೋನಾಲ್ಡ್ ಟ್ರಂಪ್ ಮೊದಲ ಪತ್ನಿ ಇವಾನಾ ಟ್ರಂಪ್ ವಿಧಿವಶ