ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ನವದೆಹಲಿಯಲ್ಲಿ ಕಾಂಗ್ರೆಸ್, TRS ಸಂಸದರ ಪ್ರತಿಭಟನೆ

ಅಗತ್ಯ ವಸ್ತುಗಳ ಬೆಲೆ ಏರಿಕೆ ಹಾಗೂ ಹಣದುಬ್ಬರ ವಿರೋಧಿಸಿ ಪ್ರತಿಪಕ್ಷ ಕಾಂಗ್ರೆಸ್ (CONGRESS) ಹಾಗೂ ಟಿ.ಆರ್.ಎಸ್ (TRS) ಸಂಸದರು ಸಂಸತ್ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.


ಹಣದುಬ್ಬರ ಏರಿಕೆಯೊಂದಿಗೆ ಅಗತ್ಯವಸ್ತುಗಳ ಬೆಲೆ ನಿರಂತರವಾಗಿ ಹೆಚ್ಚಳವಾಗುತ್ತಿದ್ದು, ಜನಸಾಮಾನ್ಯರ ಜೀವನದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ಹೇಗೆ ಅವರು ಜೀವನ ಸಾಗಿಸುತ್ತಾರೆ? ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು. ಇದನ್ನು ಓದಿ : –  ಉಪರಾಷ್ಟ್ರಪತಿ ಚುನಾವಣೆ- ಮಾರ್ಗರೇಟ್ ಆಳ್ವ ನಾಮಪತ್ರ ಸಲ್ಲಿಕೆ


ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ (RAHUL GANDHI) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತಿತರರು ಪಾಲ್ಗೊಂಡಿದ್ದರು. ಇನ್ನೊಂದೆಡೆ ಇದೇ ವಿಚಾರವಾಗಿ TRS ಸಂಸದರು ಕೂಡಾ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟಿಸಿದರು.

ಇದನ್ನು ಓದಿ : – ಉಪರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಜಗದೀಪ್ ಧನ್ ಕರ್

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!