ಬೆಳ್ಳಿ ಪದಕ ಗೆದ್ದ ನೀರಜ್ ಚೋಪ್ರಾ

ಅಮೆರಿಕದಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನ ಪುರುಷರ ಜಾವೆಲಿನ್ ಥ್ರೋನಲ್ಲಿ ನೀರಜ್ ಚೋಪ್ರಾ ( neeraj chopra ) ಬೆಳ್ಳಿ ಪದಕ ಗೆದ್ದು ಭಾರತಕ್ಕೆ ಮೊದಲ ಪದಕ ತಂದು ಕೊಟ್ಟಿದ್ದಾರೆ. ಫೈನಲ್ ನ ಲ್ಲಿ ನೀರಜ್ ಚೋಪ್ರಾ 88.13 ಮೀ. ದೂರ ಎಸೆದು ಬೆಳ್ಳಿ ಪದಕ ಪಡೆದರು. ಈ ಮೂಲಕ 19 ವರ್ಷಗಳ ಬಳಿಕ ಭಾರತಕ್ಕೆ ಮತ್ತೊಂದು ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ಪದಕ ತಂದುಕೊಟ್ಟು ಇತಿಹಾಸ ನಿರ್ಮಿಸಿದರು.


ಫೈನಲ್ನ ಲ್ಲಿ ಗ್ರೆನಡಾದ ಆಂಡರ್ಸನ್ ಪೀಟರ್ಸ್ ಸತತ ಮೂರು ಎಸೆತಗಳನ್ನು 90+ ಮೀ. ಎಸೆದು ಚಿನ್ನದ ಪದಕಕ್ಕೆ ಮುತ್ತಿಕ್ಕಿದರೆ, ನೀರಜ್ ಚೋಪ್ರಾ ಮೊದಲ ಎಸೆತ ಫೌಲ್ ಆಯಿತು. ಎರಡನೇ ಎಸೆತ 82.39 ಮೀ., ಮೂರನೇ ಎಸೆತ 86.37 ಮೀ. ಮತ್ತು ನಾಲ್ಕನೇ ಎಸೆತ 88.13 ಎಸೆದು ಬೆಳ್ಳಿ ಪದಕ ಗೆದ್ದರು. ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತ ಜಾಕುಬ್ ವಡ್ಲೆಜ್ ಮೂರನೇ ಸ್ಥಾನ ಪಡೆದು ಕಂಚಿನ ಪದಕ ಪಡೆದರು. ಒಲಿಂಪಿಕ್ಸ್ನಲ್ಲಿ ಚಿನ್ನದ ಪದಕ ಪಡೆದು ಇತಿಹಾಸ ನಿರ್ಮಿಸಿದ್ದ ನೀರಜ್ ಚೋಪ್ರಾ, ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 88.39 ಮೀ. ಎಸೆದು ಫೈನಲ್ ಗೆ ಎಂಟ್ರಿಕೊಟ್ಟಿದ್ದರು. ಫೈನಲ್ ನಲ್ಲಿ ಬೆಳ್ಳಿಗೆದ್ದು 39 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ಅಥ್ಲೇಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ 2ನೇ ಪದಕ ತಂದುಕೊಟ್ಟರು.

ಇದನ್ನೂ ಓದಿ :- ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ​ಶಿಪ್ ಫೈನಲ್ ​​ಗೆ ನೀರಜ್ ಚೋಪ್ರಾ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!