ರಾಜ್ಯಸಭಾ ಸದಸ್ಯ ಹಾಗೂ ಹಿರಿಯ ವಕೀಲರಾದ ಕಪಿಲ್ ಸಿಬಲ್ (Kapil Sibal) ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ ಕೆಲವು ತೀರ್ಪುಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸುಪ್ರೀಂ ಕೋರ್ಟ್ ಮೇಲೆ ನನಗೆ ಯಾವುದೇ ಭರವಸೆ ಇಲ್ಲ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ನಿಂದ ಪರಿಹಾರ ಸಿಗುತ್ತದೆ ಎಂದುಕೊಂಡಿದ್ದರೆ ಅದು ನಿಮ್ಮ ತಪ್ಪು ಭಾವನೆಯಾಗಿದೆ. ನಾನು ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಕಾರ್ಯನಿರ್ವಹಿಸಿ ಪೂರ್ಣಗೊಳಿಸಿದ ನಂತರ ಈ ಮಾತನ್ನು ಹೇಳುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ : – 14 ದಿನಗಳ ನ್ಯಾಯಾಂಗ ಬಂಧನಕ್ಕೆ ಸಂಜಯ್ ರಾವುತ್ – ಹಾಸಿಗೆಗೆ ನೋ ಎಂದ ನ್ಯಾಯಾಲಯ
ಸುಪ್ರೀಂ ಕೋರ್ಟ್ನಿಂದ ಮಹತ್ವದ ತೀರ್ಪು ಬಂದರೂ, ಅದು ನೆಲದ ವಾಸ್ತವತೆಯನ್ನು ಎಂದಿಗೂ ಬದಲಾಯಿಸುವುದಿಲ್ಲ. ಈ ವರ್ಷ ನಾನು ಸುಪ್ರೀಂ ಕೋರ್ಟ್ನಲ್ಲಿ 50 ವರ್ಷಗಳ ಅಭ್ಯಾಸವನ್ನು ಪೂರ್ಣಗೊಳಿಸುತ್ತೇನೆ. 50 ವರ್ಷಗಳ ನಂತರ ನನಗೆ ಸುಪ್ರೀಂ ಕೋರ್ಟ್ ಮೇಲೆ ಯಾವುದೇ ಭರವಸೆ ಇಲ್ಲ. ನೀವು ಸುಪ್ರೀಂ ಕೋರ್ಟ್ ನೀಡಿದ ಪ್ರಗತಿಪರ ತೀರ್ಪುಗಳ ಬಗ್ಗೆ ಮಾತನಾಡುತ್ತೀರಿ. ಆದರೆ ವಾಸ್ತವವಾಗಿ ಏನಾಗುತ್ತದೆ ಎಂಬುದರಲ್ಲಿ ಭಾರಿ ವ್ಯತ್ಯಾಸವಿದೆ. ಖಾಸಗಿತನದ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ. ಇ.ಡಿ ಅಧಿಕಾರಿಗಳು ನಿಮ್ಮ ಮನೆಗೆ ಬರುತ್ತಾರೆ. ನಿಮ್ಮ ಖಾಸಗಿತನ ಎಲ್ಲಿದೆ ಎಂದು ಸಿಬಲ್ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ : – ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆಗೆ ಈ ಬಾರೀ ನಿರ್ಬಂಧ ಇರುವುದಿಲ್ಲ – ಆರ್ ಅಶೋಕ್