ಬಿಹಾರ( bihar ) ದಲ್ಲಿ ಬಿಜೆಪಿ ಮತ್ತು ಜೆಡಿಯು ನಡುವಿನ ಭಿನ್ನಾಭಿಪ್ರಾಯ ಭುಗಿಲೆದ್ದಿದೆ. ಹೀಗಾಗಿ, ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳಲು ನಿತೀಶ್ ಕುಮಾರ್ ( nithis kumar ) ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಆರ್ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್ ಮತ್ತು ಇತರ ಮಹಾಘಟಬಂಧನ್ ಘಟಕಗಳು ಇಂದು ರಾಜ್ಯಪಾಲರನ್ನು ಭೇಟಿ ಮಾಡುವ ಸಾಧ್ಯತೆಯಿದೆ. ನಿತೀಶ್ ಕುಮಾರ್ ಬಿಹಾರ ರಾಜ್ಯಪಾಲ ಫಾಗು ಚೌಹಾಣ್ ಅವರನ್ನು ಭೇಟಿ ಮಾಡಲು ಸಮಯ ಕೋರಿದ್ದಾರೆ. ಅಲ್ಲದೆ, ಅವರು ತೇಜಸ್ವಿ ಯಾದವ್ ಅವರೊಂದಿಗೆ ರಾಜಭವನಕ್ಕೆ ತೆರಳುವ ನಿರೀಕ್ಷೆಯಿದೆ ಎಂದು ಮೂಲಗಳು ತಿಳಿಸಿವೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಜೊತೆಗಿನ ಶಿವಸೇನೆಯ ಮೈತ್ರಿಯನ್ನು ಒಡೆದು ಹೊಸ ಸರ್ಕಾರ ರಚಿಸಿರುವ ಬಿಜೆಪಿಗೆ ಬಿಹಾರದಲ್ಲಿ ಮುಖಭಂಗವಾಗುವ ಸಾಧ್ಯತೆ ದಟ್ಟವಾಗಿದೆ. ಬಿಜೆಪಿ ಜೊತೆಗಿನ ಮೈತ್ರಿಯಿಂದ ದೂರ ಸರಿಯಲು ನಿರ್ಧರಿಸಿರುವ ಜೆಡಿಯು ಅಧ್ಯಕ್ಷ ನಿತೀಶ್ ಕುಮಾರ್ ವಿಪಕ್ಷಗಳ ಜೊತೆ ಸೇರಿ ಮಹಾಘಟಬಂಧನ್ 2.0 ರಚನೆ ಮಾಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗಿದೆ. ಈಗಾಗಲೇ ತೇಜಸ್ವಿ ಯಾದವ್ (Tejaswi Yadav) ಅವರೊಂದಿಗೆ ರಾಜ್ಯಪಾಲರ ಭೇಟಿಗೆ ನಿತೀಶ್ ಕುಮಾರ್ (Nitish Kumar) ಸಮಯಾವಕಾಶ ಕೇಳಿರುವುದರಿಂದ ಈ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಿದೆ.
ಇದನ್ನೂ ಓದಿ : – ಅಯೋಧ್ಯೆಯಲ್ಲಿ ನಡೆದಿರುವ ಭೂ ಅಕ್ರಮದಲ್ಲಿ ಬಿಜೆಪಿ ಶಾಸಕರ ವಿರುದ್ಧ ಆರೋಪ ವಿಚಾರ – ಟ್ವೀಟ್ ಮೂಲಕ ಕಿಡಿಕಾರಿದ ಕಾಂಗ್ರೆಸ್