ಕೇಂದ್ರ ಸರ್ಕಾರದ ಡಿಜಿಟಲ್ ಇಂಡಿಯಾ ( DIGITAL INDIA ) ಯೋಜನೆ ಬಗ್ಗೆ ಕಾಂಗ್ರೆಸ್ ಟ್ವೀಟ್ ಮೂಲಕ ವ್ಯಂಗ್ಯವಾಡಿದೆ.
ಮೋದಿಜಿಯವರ ‘ಡಿಜಿಟಲ್ ಇಂಡಿಯಾ‘ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಸಮರ್ಥವಾಗಿ ಅರ್ಥ ಕೊಡುತ್ತಿದೆ. ಯಾವ ರೀತಿಯಾಗಿ ಅಂದ್ರೆ ಅಕ್ರಮ ನಡೆಸುವುದರಲ್ಲಿ ಮಾತ್ರ…! ಎಲ್ಲಾ ನೇಮಕಾತಿ ಪರೀಕ್ಷೆಗಳಲ್ಲೂ ಬ್ಲೂಟೂತ್, ಫೋನ್, ಸ್ಮಾರ್ಟ್ ವಾಚ್ ಗಳೇ ಕೆಲಸ ಮಾಡುತ್ತಿವೆ. 40% ಸರ್ಕಾರದ ಈ ಡಿಜಿಟಲ್ ಕ್ರಾಂತಿಯಿಂದ ‘ಸರ್ಕಾರಿ ಹುದ್ದೆ ಮಾರಾಟ ಯೋಜನೆ’ ಎಗ್ಗಿಲ್ಲದೆ ಸಾಗುತ್ತಿದೆ ಎಂದು ಪ್ರಧಾನಿ ನರೆಂದ್ರ ಮೋದಿಯ ಯೋಜನೆಗೆ ಟ್ವೀಟ್ ಮೂಲಕ ಕಾಂಗ್ರೆಸ್ ಲೇವಡಿ ಮಾಡಿದೆ. ಇದನ್ನೂ ಓದಿ : – ಪ್ರವೀಣ್ ಕುಮಾರ್ ನೆಟ್ಟಾರು ಹತ್ಯೆ ಪ್ರಕರಣ – ಮೂವರು ಆರೋಪಿಗಳ ಬಂಧನ
ರಾಜ್ಯದಲ್ಲಿ ಸಿಎಂ ಬದಲಾವಣೆ ಗೊಂದಲಗಳಿಗೆ ಕಾಂಗ್ರೆಸ್ ಹೊಣೆಯೇ..? ಸಿಎಂ ಬದಲಾವಣೆ ವಿಚಾರದ ನಂತರ ರಾಜ್ಯಾಧ್ಯಕ್ಷರ ಬದಲಾವಣೆಯ ಗೊಂದಲ. ರಾಜ್ಯಾಧ್ಯಕ್ಷರ ಅವಧಿ ಮುಗಿದಿದೆ ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದರೆ, ಯಾರು ಹೇಳಿದವರು ಎಂದು ನಳೀನ್ ಕುಮಾರ್ ಕಟೀಲ್ ಕೇಳುತ್ತಾರೆ. ಸ್ಪಷ್ಟತೆ ಇಲ್ಲದೆ ಕಾಂಗ್ರೆಸ್ ಕೈಗೆ ಕೋಲು ಕೊಡುವವರೂ ಇವರೇ, ಹೊಡೆಸಿಕೊಂಡ ನಂತರ ಗೋಳಾಡುವವರೂ ಇವರೇ! ಎಂದು ವ್ಯಂಗ್ಯವಾಡಿದೆ.
ಇದನ್ನೂ ಓದಿ : – ಬೃಹತ್ ಐಟಿ ದಾಳಿ – 32 ಕೆಜಿ ಚಿನ್ನ, 56 ಕೋಟಿ ಕ್ಯಾಶ್, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿ ಪತ್ತೆ