ಪ್ರಧಾನಿ ಹುದ್ದೆಯ ಆಕಾಂಕ್ಷಿ ನಾನಲ್ಲ. ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಶ್ರಮಿಸುತ್ತೇನೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ( nitish kumar ) ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಹಾರ ಸಿಎಂ, ನನಗೆ ಪ್ರಧಾನಿಯಾಗುವ ಯಾವುದೇ ಆಲೋಚನೆ ಇಲ್ಲ. ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಪ್ರಯತ್ನಿಸುತ್ತೇನೆ ಮತ್ತು ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ಹೇಳಿದ್ದಾರೆ.
ಬಿಹಾರ( bihar ) ದಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡ ನಂತರ ರಾಜಕೀಯ ಬಿರುಗಾಳಿಯನ್ನು ಉಂಟುಮಾಡಿದ್ದು, ನಿತೀಶ್ ಕುಮಾರ್ ಅವರು ತಾವು ಪ್ರಧಾನಿ ಹುದ್ದೆಯ ಆಕಾಂಕ್ಷಿ ಅಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದ್ದಾರೆ. ಪ್ರಧಾನಿ ಹುದ್ದೆಯ ಮಹತ್ವಾಕಾಂಕ್ಷೆಗಳು ತಮ್ಮ ಮನಸ್ಸಿನಲ್ಲಿಲ್ಲ ಎಂದಿದ್ದಾರೆ. ಇದನ್ನೂ ಓದಿ : – ನನ್ನ ಸತ್ಯ ಅವರಿಗೆ ಗೊತ್ತು, ಅವರ ಸತ್ಯ ನನಗೆ ಗೊತ್ತು – ಸಿದ್ದರಾಮಯ್ಯಗೆ ಟಾಂಗ್ ನೀಡಿದ ಸುಧಾಕರ್
ಆಗಸ್ಟ್ 10 ರಂದು ಎಂಟನೇ ಬಾರಿಗೆ ಬಿಹಾರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ, ನಿತೀಶ್ ಕುಮಾರ್ ಅವರು ಮುಂದಿನ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ( narendra modi ) ಅವರ ವಿರುದ್ಧ ವಾಗ್ದಾಳಿ ನಡೆಸಿದರು. ಅವರು 2014 ರಲ್ಲಿ ಗೆದ್ದಿದ್ದಾರೆ, ಆದರೆ ಅವರು 2024 ರಲ್ಲಿ ಗೆಲ್ಲುತ್ತಾರೆಯೇ? ಎಂದು ಮತ್ತೊಮ್ಮೆ ಮೋದಿ ಪ್ರಧಾನಿಯಾಗಲ್ಲ ಎಂದು ಪರೋಕ್ಷವಾಗಿ ಹೇಳಿದ್ದರು.
ಇದನ್ನೂ ಓದಿ : – ಮಂತ್ರಾಲಯದಲ್ಲಿ ವಿಜೃಂಭಣೆಯಿಂದ ನೆರವೇರಿದ ರಾಯರ ಪೂರ್ವಾರಾಧನೆ