ಪಿಜ್ಜಾ ಹಿಟ್ಟಿಗೆ ತಾಗುವಂತೆ ಶೌಚಾಲಯ ಸ್ವಚ್ಛ ಮಾಡುವ ಬ್ರಷ್ ಮತ್ತು ಪೊರಕೆಯನ್ನು ನೇತು ಹಾಕಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬಹುರಾಷ್ಟ್ರೀಯ ಪಿಜ್ಜಾ ರೆಸ್ಟೋರೆಂಟ್ ಸರಣಿ ಕಂಪೆನಿ ಡೊಮಿನೊಸ್ ( dominos ) ವಿರುದ್ಧ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.
ಸಾಹಿಲ್ ಕರ್ನಾನಿ ಎಂಬ ಹೆಸರಿನ ಟ್ವಿಟ್ಟರ್ ಬಳಕೆದಾರ, ಫೋಟೋ ಮತ್ತು ವೀಡಿಯೊವನ್ನು ಪೋಸ್ಟ್ ಮಾಡಿ, “@dominos_india ನಮಗೆ ತಾಜಾ ಪಿಜ್ಜಾವನ್ನು ಹೇಗೆ ಪೂರೈಸುತ್ತಿದೆ ನೋಡಿ, ಇದು ಬೆಂಗಳೂರಿನ ಒಂದು ಸ್ಥಳ ಎಂದು ಬರೆದುಕೊಂಡಿದ್ದಾರೆ. ಫೋಟೋ ವೈರಲ್ ಆಗುತ್ತಿದ್ದಂತೆ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ, ಆರೋಗ್ಯ ಸಚಿವಾಲಯ, ಕರ್ನಾಟಕ ಆರೋಗ್ಯ ಸಚಿವ ಡಾ ಕೆ.ಸುಧಾಕರ್ ಮತ್ತು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿದ್ದಾರೆ. ಇದನ್ನೂ ಓದಿ : – ಬಿಜೆಪಿಗೆ ಕಾಮಾಲೆ ರೋಗ ಬಂದಿದೆ – ಈಶ್ವರಪ್ಪ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ
ಫೋಟೋ ವೈರಲ್ ಆಗುತ್ತಿದ್ದಂತೆ ಡೊಮಿನೊಸ್ ಹೊಸ ಹೇಳಿಕೆ ಬಿಡುಗಡೆ ಮಾಡಿದೆ. ಉನ್ನತ ಗುಣಮಟ್ಟದ ನೈರ್ಮಲ್ಯ ಮತ್ತು ಆಹಾರ ಸುರಕ್ಷತೆಯನ್ನು ಕಾಪಾಡಿಕೊಳ್ಳಲು ಶಿಷ್ಟಾಚಾರಗಳನ್ನು ಕಾಪಾಡಲು ಕಂಪೆನಿ ಬದ್ಧವಾಗಿದೆ. ನಮ್ಮ ಮಳಿಗೆಯೊಂದಕ್ಕೆ ಸಂಬಂಧಿಸಿದ ಘಟನೆಯನ್ನು ನೀವು ನಮ್ಮ ಗಮನಕ್ಕೆ ತಂದಿದ್ದೀರಿ. ಇದು ಪ್ರತ್ಯೇಕ ಘಟನೆ ಎಂದು ನಾವು ಸ್ಪಷ್ಟಪಡಿಸುತ್ತೇವೆ. ರೆಸ್ಟೋರೆಂಟ್ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಂಡಿದ್ದೇವೆ. ಆಹಾರ ಸುರಕ್ಷತೆ ಗುಣಮಟ್ಟವನ್ನು ಕಾಪಾಡುವಲ್ಲಿ ನಾವು ರಾಜಿ ಮಾಡಿಕೊಳ್ಳುವುದಿಲ್ಲ ಎಂದಿದೆ.
ಇದನ್ನೂ ಓದಿ : – ಕರ್ನಾಟಕದಲ್ಲಿ ಹಿಂದೂ ಸಮಾಜ ಮೇಲೆದ್ದರೆ ಮುಸ್ಲಿಂ ಗೂಂಡಾಗಳು ಉಳಿಯುವ ಪ್ರಶ್ನೆಯೇ ಇಲ್ಲ – ಕೆ.ಎಸ್.ಈಶ್ವರಪ್ಪ