ಚಿಕ್ಕಬಳ್ಳಾಪುರದಲ್ಲಿ ದ್ವಿಚಕ್ರವಾಹನದಿಂದ ಬಿದ್ದು ಸವಾರ ಸ್ಥಳದಲ್ಲೆ ಸಾವು

ದ್ವಿಚಕ್ರ ವಾಹನ (Vehicle) ದಿಂದ ಆಯತಪ್ಪಿ ರಸ್ತೆಗೆ ಬಿದ್ದು ಸವಾರನ ತಲೆ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ (Chikkaballapura) ನಗರದಲ್ಲಿ ನಡೆದಿದೆ. ಬೆಂಗಳೂರು (Bengaluru) ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಅತ್ತಿಬೆಲೆ ಗ್ರಾಮದ ಮುರುಳಿ(35) ಮೃತ ವ್ಯಕ್ತಿ.

ಮುರುಳಿ ದೇವನಹಳ್ಳಿ (Devnanahalli) ಕಡೆಯಿಂದ ಚಿಕ್ಕಬಳ್ಳಾಪುರದ ಕಡೆಗೆ ಆಕ್ಟೀವಾ ಹೊಂಡಾ ಮೂಲಕ ಬರುತ್ತಿದ್ದ. ಆದರೆ ಗಿರಿಯಾಸ್ ಶೋ ರೂಂ ಮುಂಭಾಗದಲ್ಲಿ ಏಕಾಏಕಿ ಬ್ರೇಕ್ ಹಾಕಿದ್ದಾನೆ. ಗಾಡಿ ಸ್ಕಿಡ್ ಆಗಿ ಮುರಳಿ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ ಚಿಕ್ಕಬಳ್ಳಾಪುರದಿಂದ ದೊಡ್ಡಬಳ್ಳಾಪುರ ಮಾರ್ಗದ ಕಡೆಗೆ ಹೋಗುತ್ತಿದ್ದ ಕೆಎಸ್ಆರ್ಟಿಸಿ (KSRTC) ಬಸ್ ನ ಹಿಂಬದಿ ಚಕ್ರಕ್ಕೆ ಮುರಳಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರು ಕೆಎಸ್ಆರ್ಟಿಸಿ ಬಸ್ ನ್ನು ಅಡ್ಡ ಹಾಕಿ ತಡೆಯೊಡ್ಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಬಸ್ ಹಾಗೂ ಅಪಘಾತಕ್ಕೊಳಗಾದ ಬೈಕ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ : – ನಾನು ಆರೋಗ್ಯವಾಗಿದ್ದೇನೆ, ಶೀಘ್ರದಲ್ಲೇ ಪಕ್ಷದ ಕಚೇರಿಗೆ ಭೇಟಿ ನೀಡುತ್ತೇನೆ- ಮಾಜಿ ಪ್ರಧಾನಿ ದೇವೇಗೌಡರ ಸಂದೇಶ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!