ಮಂಗಳೂರಿನಲ್ಲಿ ಬಸವರಾಜ್ ಬೊಮ್ಮಾಯಿ – ಕಟೀಲ್ ಭೇಟಿ

ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಆರೋಗ್ಯವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( BASAVARAJ BOMMAI ) ಇಂದು ವಿಚಾರಿಸಿದರು.

ಬಾವುಟಗುಡ್ಡೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಕೆದಂಬಾಡಿ ರಾಮಯ್ಯ ಗೌಡ ( RAMAYYA GOWDA ) ರ ಪ್ರತಿಮೆ ಲೋಕಾರ್ಪಣೆ ಮಾಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿದ್ದ ಮುಖ್ಯಮಂತ್ರಿಗಳು ಎ.ಜೆ ಆಸ್ಪತ್ರೆ ಗೆ ಭೇಟಿ ನೀಡಿ ಕಟೀಲ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಟ್ವೀಟ್ ಮಾಡುವ ಮೂಲಕ ಕಟೀಲ್ ಆರೋಗ್ಯ ಬೇಗ ಸುಧಾರಿಸಲಿ ಎಂದು ಹಾರೈಸಿದ್ದಾರೆ.
ಈ ಸಂದರ್ಭದಲ್ಲಿ ತಮ್ಮನ್ನ ವೈಯಕ್ತಿಕವಾಗಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಮುಖ್ಯಮಂತ್ರಿಗಳಿಗೆ ಕಟೀಲ್ ಧನ್ಯವಾದಗಳನ್ನು ತಿಳಿಸಿದ್ದಾರೆ.

 ಇದನ್ನೂ ಓದಿ : – ಸಹೋದರಿಯ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಹಾಕಿದಕ್ಕೆ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ

Related Articles

Leave a Reply

Your email address will not be published. Required fields are marked *

Back to top button
Close

Adblock Detected

Support Free Content We use ads to keep our content free for you. Please allow ads and let sponsors fund your surfing. Thank you!