ಮತದಾರರ ಪಟ್ಟಿ (Voters list) ಯಲ್ಲಿ ಹೆಸರು ಡಿಲೀಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ (Koppal) ದ ವಣಬಳ್ಳಾರಿ ಗ್ರಾಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯೆ ನೀಡಿದ್ದಾರೆ. ಮತದಾರನ ವೋಟ್ ಕಳ್ಳತನ ಮಾಡುವ ಕೆಲಸ ಮಾಡಿದ್ದಾರೆ. ಚಿಲುಮೆ ಎಂಬ ಸಂಸ್ಥೆ (Chilume institution) ಗೆ ಮತದಾರರ ಪಟ್ಟಿ ಪರಿಷ್ಕರಣೆಗೆ ಅವಕಾಶ ನೀಡಿದ್ದಾರೆ.
ಎಲ್ಲಿ BJP ಸೋಲುತ್ತೆ ಅಲ್ಲೆಲ್ಲ ತಮಗೆ ವೋಟ್ ಹಾಕದವರ ವೋಟ್ ಡಿಲೀಟ್ ಮಾಡಿದ್ದಾರೆ. ಅಲ್ಪಸಂಖ್ಯಾತರು, ಅಹಿಂದ ವರ್ಗದವರ ವೋಟ್ ಡಿಲೀಟ್ ಮಾಡಿದ್ದಾರೆ .ಈ ಬಗ್ಗೆ ನ್ಯಾಯಾಂಗ ತನಿಖೆ ಮಾಡಲು ಒತ್ತಾಯ ಮಾಡುತ್ತೇವೆ .ಸಂಬಂಧಿಸಿದ ಸಚಿವರು ಇದಕ್ಕೆ ಜವಾಬ್ದಾರರು ಎಂದು ಹೇಳಿದರು. ಇದೇ ವೇಳೆ ಬಳ್ಳಾರಿ ಸಮಾವೇಶದಲ್ಲಿ ಸಚಿವ ಶ್ರೀರಾಮುಲು (Sri ramulu) ಹೇಳಿಕೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಶ್ರೀರಾಮುಲು ಒಬ್ಬ ಪೆದ್ದ, ಅವನಿಗೆ ನಾನು ಉತ್ತರ ಕೊಡಲ್ಲ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ :– ಗಂಭೀರ ಹಾನಿ ಉಂಟು ಮಾಡುವ ಉದ್ದೇಶದಿಂದ ಭಯೋತ್ಪಾದಕ ಕೃತ್ಯ ಎಸಗಲಾಗಿದೆ – ಡಿಜಿಪಿ ಪ್ರವೀಣ್ ಸೂದ್